ವಿಜಯ ಸಂಘರ್ಷ
ಭದ್ರಾವತಿ: ಕ್ಷೇತ್ರದ ಶಾಸಕರಾಗಿ 4 ನೇ ಬಾರಿಗೆ ಆಯ್ಕೆಯಾದರೂ ಸಹ ಬಿ.ಕೆ ಸಂಗಮೇಶ್ವರ್‌ಗೆ ಈ ಬಾರಿ ಸಹ ಸಚಿವ ಸ್ಥಾನ ಕೈ ತಪ್ಪಿದ್ದು, ಕ್ಷೇತ್ರದ ಜನತೆಯಲ್ಲಿ ನಿರಾಸೆಯನ್ನುಂಟು ಮಾಡಿದೆ.
ಸರ್ಕಾರ ರಚನೆ ಸಂದರ್ಭದಲ್ಲಿಯೇ ಸಚಿವ ಸ್ಥಾನ ಸಿಗುವ ವಿಶ್ವಾಸ ಹೊಂದಲಾಗಿತ್ತು. ಇದೀಗ ಸಂಪುಟ ವಿಸ್ತರಣೆ ಸಂದರ್ಭ ದಲ್ಲೂ ಸಚಿವ ಸ್ಥಾನದಿಂದ ವಂಚಿತರಾಗಿ ರುವುದು ವಿಪರ್ಯಾಸದ ಸಂಗತಿಯಾಗಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಬೆಂಗಳೂರಿನಲ್ಲಿಯೇ ಉಳಿದು ಕೊಂಡು ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋ ಟಿಗೆ ಮುಂದಾಗಿದ್ದ ಬಿ.ಕೆ ಸಂಗಮೇಶ್ವರ್ ಇದೀಗ ಬರಿ ಕೈಯಲ್ಲಿ ಹಿಂದಿ ರುಗುವಂತಾಗಿದೆ.
ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲೂ ಸಹ ಸಚಿವ ಸ್ಥಾನಕ್ಕಾಗಿ ಸಂಗಮೇಶ್ವರ್ ತೀವ್ರ ಪೈಪೋಟಿ ನಡೆಸಿ ದ್ದರು. ಕೊನೆ ಹಂತದಲ್ಲಿ ಇವರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕಗೊಳಿಸ ಲಾಗಿತ್ತು. ಇದೀಗ 4 ನೇ ಬಾರಿಗೆ ಗೆಲುವು ಸಾಧಿಸಿದ್ದು, ಅಲ್ಲದೆ ಪಕ್ಷದ ವರಿಷ್ಠರು ಈ ಬಾರಿ ಗೆಲುವು ಸಾಧಿಸಿದ್ದಲ್ಲಿ ಸಚಿವರಾಗು ವುದು ಖಚಿತ ಎಂದು ಬಹಿರಂಗ ಸಭೆಯಲ್ಲಿ ಘೋಷಿಸಿದ್ದರು. ಆದರೆ ಇದೀಗ ಸಚಿವ ಸ್ಥಾನದಿಂದ ವಂಚಿತರಾಗಿರುವುದು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಕ್ಷೇತ್ರದ ಜನತೆಯಲ್ಲಿ ನಿರಾಸೆಯನ್ನುಂಟು ಮಾಡಿದೆ.
ಸಂಗಮೇಶ್ವರ್‌ಗೆ ಯಾವುದೇ ರಾಜಕೀಯ ಹಿನ್ನಲೆಯೂ ಇಲ್ಲ, ಗುರುಗಳು ಸಹ ಯಾರು ಇಲ್ಲ. ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬಂದವರು. ಸ್ವಂತ ಬಲದ ಮೇಲೆ ರಾಜಕೀಯ ಅಸ್ತಿತ್ವ ಕಂಡುಕೊಂಡ ವರು. ತಮ್ಮದೇ ವರ್ಚಸ್ಸನ್ನು ಉಳಿಸಿ ಕೊಳ್ಳುವ ಜೊತೆಗೆ ಪಕ್ಷ ನಿಷ್ಠೆಯಲ್ಲಿ ಮುಂದುವರೆದವರು. ಕಾಂಗ್ರೆಸ್ ಪಕ್ಷದ ಶಾಸಕರಲ್ಲಿ ಜಿಲ್ಲೆಯಲ್ಲಿಯೇ ಹಿರಿಯ ರಾಗಿದ್ದು, 4ಬಾರಿ ಗೆದ್ದರೂ ಸಹ ಸೂಕ್ತ ಸ್ಥಾನಮಾನ ಸಿಗದಿರುವುದು ನಿಜಕ್ಕೂ ವಿಷಾದನೀಯ ಸಂಗತಿಯಾಗಿದೆ. ಇದರಿಂದ ಮತದಾರರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ನಿರಾಸೆಯಾಗಿರುವುದು ಸತ್ಯ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795
Tags:
MLA B.K.Sangameshar