ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡ್ ಜಾರಿ ಮಾಡದಿದ್ದರೆ ಪ್ರತಿಭಟನೆ: ಆರಗ

ವಿಜಯ ಸಂಘರ್ಷ
ತೀರ್ಥಹಳ್ಳಿ :ಮತದಾರರನ್ನು ವಂಚಿಸಿ ಗೆಲ್ಲುವುದು ತಪ್ಪು. ಕಾಂಗ್ರೆಸ್ ನೀಡಿದ ಗ್ಯಾರಂಟಿ ಕಾರ್ಡ್ ಶೀಘ್ರ ಜಾರಿ ಮಾಡ ದಿದ್ದರೆ ಪ್ರತಿಭಟನೆ ಮಾಡುತ್ತೇವೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮೇಲಿನ ಕುರುವಳ್ಳಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್ ಈ ಮಟ್ಟದ ಗೆಲುವನ್ನು ನಿರೀಕ್ಷೆ ಮಾಡಿರಲಿಲ್ಲ. ಹಾಗಾಗಿ ಹುಸಿ ಭರವಸೆ ನೀಡಿತ್ತು. ಈಗ ಅದನ್ನು ಈಡೇರಿಸಲಾಗದೆ ಪರದಾಟ ನಡೆಸುತ್ತಿದೆ. ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಸದಸ್ಯರು ಜನರ ಕೆಲಸಗಳಿಗೆ ಅಡ್ಡಿ ಪಡಿಸುತ್ತಿದ್ದಾರೆ ಇದು ಮುಂದುವರೆದರೆ ಪಂಚಾಯತ್ ಮುತ್ತಿಗೆ ಹಾಕ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಮುಖಂಡ ಆರ್ ಮದನ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರ್,ಮಾಜಿ ತಾಲೂಕು ಪಂಚಾಯತ್ ಸದಸ್ಯ ಚಂದವಳ್ಳಿ ಸೋಮಶೇಖರ್ ಹಾಗೂ ಸಭೆ ಅಧ್ಯಕ್ಷತೆ ವಹಿಸಿದ್ದ ಅಣ್ಣಪ್ಪ ಮಾತನಾಡಿದರು.

ವೇದಿಕೆಯಲ್ಲಿ ಹಾರೋಗೊಳಿಗೆ ವಾಸು, ಪ್ರಕಾಶ್ ಶೆಟ್ಟಿ, ಪೂರ್ಣೇಶ್ ಪೂಜಾರಿ, ಬುಕ್ಲಾಪುರ ಪೂರ್ಣೇಶ್, ಪೆರುಮಳ್, ಆದರ್ಶ ಮುತ್ತುಗುಂಡಿ, ನಂಬಳ ಮುರುಳಿ ಮುಂತಾದವರಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಶಂಕರ್ ಶೆಟ್ಟಿ ದಂಪತಿಗಳಿಗೆ ಆರಗ ಜ್ಞಾನೇಂದ್ರ ಸನ್ಮಾನಿಸಿದರು.

ಸುದ್ದಿ ಹಾಗೂ ಜಾಹೀರಾತುಗಾಗಿ ಸಂಪರ್ಕಿಸಿ +919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು