ಅವೈಜ್ಞಾನಿಕ ವಿದ್ಯುತ್ ದರ ಸರಿಪಡಿಸಲು ಕೈಗಾರಿಕೋದ್ಯಮಿಗಳ ಆಗ್ರಹ

ವಿಜಯ ಸಂಘರ್ಷ
ಶಿವಮೊಗ್ಗ: ಅವೈಜ್ಞಾನಿಕ ವಿದ್ಯುತ್ ದರ ಪರಿಷ್ಕರಣೆಯಿಂದ ಕೈಗಾರಿಕಾ ಉದ್ಯಮಿ ಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿ ಸುವಂತೆ ಹಾಗೂ ಕೆಇಆರ್‌ಸಿ ಮತ್ತು ಎಸ್ಕಾಂ ನೀತಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ನಗರದ ಎಂಆರ್‌ಎಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮೆಸ್ಕಾಂ ವಿದ್ಯುತ್ ಬಿಲ್‌ನಲ್ಲಿ ಅವೈಜ್ಞಾನಿ ಕವಾಗಿ ಶೇ. 25 ರಿಂದ 75ರಷ್ಟು ಹೆಚ್ಚು ವರಿ ದರ ನೀಡುತ್ತಿರುವುದು ಆತಂಕಕಾರಿ ಯಾಗಿದೆ. ಮೆಸ್ಕಾಂ ವಿದ್ಯುತ್ ದರ ಹೆಚ್ಚು ವರಿ ಹೊರೆ ಆಗುತ್ತಿದ್ದು, ಏಕಾಏಕಿ ವಿದ್ಯುತ್ ದರ ಹೆಚ್ಚಿಸಿರುವುದು ಖಂಡ ನೀಯ. ಇದರಿಂದ ಕೈಗಾರಿಕೆ ಉದ್ದಿಮೆ ಗಳು ಮುಚ್ಚುವ ಭೀತಿಯಲ್ಲಿವೆ.
ಸಾರ್ವಜ ನಿಕರಿಗೂ ಹೊರೆ ಆಗುತ್ತಿದೆ. ಕೂಡಲೇ ವಿದ್ಯುತ್ ದರ ಹೆಚ್ಚಳ ಆದೇಶ ವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ದರದಲ್ಲಿನ ಫಿಕ್ಸೆಡ್ ಚಾರ್ಜ್ ಹಿಂದಿನಂತೆ ಮುಂದುವರೆಸಿಕೊಂಡು ಹೋಗಬೇಕು. ವಿದ್ಯುತ್ ಶಕ್ತಿಯ ಯೂನಿಟ್ ದರಗಳನ್ನು ಮಾರ್ಚ್ 2023ರ ನಿಗದಿತ ದರಗಳನ್ನೇ ಮುಂದುವ ರಿಸಬೇಕು. ಇಂಧನ ಬೆಲೆ ಅಸ್ಥಿರ ಪದ್ಧತಿಯಲ್ಲಿರುವುದರಿಂದ ಹೆಚ್ಚು ಹೊರೆಯಾಗುತ್ತಿದೆ.

ಕರ್ನಾಟಕದಲ್ಲಿ ನೀರಿನಿಂದ ಹೆಚ್ಚು ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಇಂಧನ ಬೆಲೆ ಹೊರೆ ಕಡಿಮೆ ಇರುವುದ ರಿಂದ ಸರ್ಕಾರ ಶೇ. 50ರಷ್ಟುವಿನಾಯಿತಿ ಘೋಷಿಸಬೇಕು ಎಂದು ಮನವಿ ಮಾಡಿದರು.

ವಿದ್ಯುತ್ ದರದ ಮೇಲಿನ ತೆರಿಗೆಯನ್ನು ಹಾಲಿ ಶೇ 9 ರಿಂದ 3ಕ್ಕೆ ಇಳಿಸಿ 3-4 ವರ್ಷ ಶೇ 3 ದರವನ್ನು ನಿಗಧಿಪಡಿಸಬೇಕು. ಎಂಎಸ್‌ಎಂಇ ಉದ್ಯಮಗಳಿಗೆ ಸರ್ಕಾರದ ಅನುದಾನವನ್ನ ನಿಗಧಿಪಡಿಸಿ ಮುಂದು ವರೆಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಕೆಲವು ಶಾಸನ ಬದ್ಧ ಬದಲಾವಣೆಗಳನ್ನು ಮಾಡಬೇಕು. ಮೆಸ್ಕಾಂ ಖಾಸಗಿ ವಿದ್ಯುತ್ ಶಕ್ತಿ ಕಂಪನಿ ಗಳಿಂದ ವಿದ್ಯುತ್ ಖರೀದಿಸಿ 15 ಪೈಸೆ ಯೂನಿಟ್‌ಗೆ ವೆಚ್ಚ ಸೇರಿಸಿ ಕೈಗಾರಿಕೆಗಳಿಗೆ ಮರುವಿತರಣೆ ಮಾಡುವ ಮೂಲಕ ಉದ್ಯಮಕ್ಕೆ ಸಹಾಯ ಮಾಡಬೇಕು. ಮೆಸ್ಕಾಂಗೆ ಬಾಕಿ ಇರುವ 11 ಸಾವಿರ ಕೋಟಿ ರೂ. ಹಣವನ್ನು ವಸೂಲಿ ಮಾಡಲು ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳ ಬೇಕು ಎಂದು ಮನವಿ ಮಾಡಿದರು.

ಆರು ತಿಂಗಳಿಗೊಮ್ಮೆ ವಿದ್ಯುತ್ ಪರಿಷ್ಕರ ಣೆಯನ್ನು ಬಿಟ್ಟು ಎರಡು ವರ್ಷಗಳಿ ಗೊಮ್ಮೆ ಪರಿಷ್ಕರಣೆ ಮಾಡುವ ಪದ್ಧತಿ ಅನುಸರಿ ಸುವುದು ಮತ್ತು ಅಳವಡಿಸಿ ಕೊಳ್ಳುವುದು. ಬಿಲ್ಲಿಂಗ್ ದಿನಾಂಕಗಳನ್ನು ಮೆಸ್ಕಾಂನಿಂದ ಪ್ರತಿ ತಿಂಗಳ 1 ರಿಂದ 30 ಅಥವಾ 31 ರವರೆಗೆ ಮಾತ್ರ ಪರಿಗಣಿ ಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ನಂತರ ಮೆಸ್ಕಾಂ ಅಧಿಕ್ಷಕ ಇಂಜಿನಿಯರ್ ಹಾಗೂ ಜಿಲ್ಲಾಧಿಕಾರಿ ಗಳಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹಾಗೂ ಸಂಯೋಜಿತ ಸಂಘ ಸಂಸ್ಥೆಗಳ ಪರವಾಗಿ ಮನವಿ ಸಲ್ಲಿಸ ಲಾಯಿತು. ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿ ನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ ಕುಮಾರ್, ರಮೇಶ್ ಕುಮಾರ್ ಹೆಗಡೆ ಸೇರಿದಂತೆ ನೂರಾರು ಉದ್ಯಮಿಗಳು ಹಾಜರಿದ್ದರು.

ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ,:+919743225795

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು