ವಿಜಯ ಸಂಘರ್ಷ
ಭದ್ರಾವತಿ: ನಗರದ ಎಂಪಿಎಂ ಕಾರ್ಖಾನೆ ಯನ್ನು ಅಭಿವೃದ್ಧಿ ಪಡಿಸುವುದಾಗಿ ಚುನಾ ವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಆರು ತಿಂಗಳ ಒಳಗೆ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಪಿಎಂ ಕಾರ್ಖಾನೆ ಮುಚ್ಚಿರು ವುದರಿಂದ ಇಡೀ ಭದ್ರಾವತಿ ಯ ಆರ್ಥಿಕ ಚಟುವಟಿಕೆಗಳು ನಿಧಾನವಾಗಿವೆ. ಕಾರ್ಖಾನೆ ಮುಚ್ಚಲು 2013ರಲ್ಲಿ ಅಧಿಕಾರದಲ್ಲಿದ್ದ ಸಿದ್ದ ರಾಮಯ್ಯ ಸರಕಾರವೆ ಕಾರಣವಾಗಿದೆ ಎಂದು ಆರೋಪಿಸಿದರು.
ಚುನಾವಣೆ ಸಮಯದಲ್ಲಿ ನಗರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಬಹಿರಂಗ ಸಭೆಯಲ್ಲಿ ಮಾತಿನಂತೆ ಕಾರ್ಖಾನೆ ಯನ್ನು ಅಭಿವೃದ್ಧಿ ಪಡಿಸಬೇಕು ಎಂದು ಒತ್ತಾಯ ಮಾಡಿದರು.
ಸಿಎಂ ಸಿದ್ದರಾಮಯ್ಯ, ಸಚಿವ ಮಧು ಬಂಗಾರಪ್ಪ ಶಾಸಕರಾದ ಬೇಳೂರು ಗೋಪಾಲ ಕೃಷ್ಣ, ಬಿ.ಕೆ.ಸಂಗಮೇಶ್ , ಗೋಪಾಲಕೃಷ್ಣ ಅವರಿಗೆ ಅಭಿನಂದಿ ಸಿದ ಅವರು, ಸಚಿವ ಸ್ಥಾನ ಸಿಗದಿರು ವುದಕ್ಕೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಬೇಸರ ಮಾಡಿಕೊಳ್ಳದೆ ಕಾರ್ಖಾನೆಯ ಅಭಿವೃದ್ಧಿಗಾಗಿ ಸರಕಾರ ಜತೆ ಸಂಪರ್ಕ ಇಟ್ಟುಕೊಳ್ಳ ಬೇಕು ಎಂದು ಕಿವಿಮಾತು ಹೇಳಿದರು.
ಹಳೇನಗರದ ಕನಕ ಮಂಟಪದ ಎದುರಿನ ಬಿಇಒ ಕಚೇರಿ ಪಕ್ಕದಲ್ಲಿ 2017ರಲ್ಲಿ ನಿರ್ಮಿಸಿದ ಡಾ:ಬಿ.ಆರ್. ಅಂಬೇಡ್ಕರ್ ಭವನದ ಕಾಮಗಾರಿ ಯನ್ನು ಪೂರ್ಣ ಗೊಳಿಸಬೇಕು. ಸಿಎಂ ಸಿದ್ದ ರಾಮಯ್ಯ ಅವರೆ ಇದನ್ನು ಉದ್ಘಾಟಿಸ ಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸ ಲಾಗುವುದು ಎಂದು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬ್ರಹ್ಮಲಿಂಗಯ್ಯ, ಬಸವರಾಜ್ ಮತ್ತಿತರರಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ : +919743225795