ವಿಜಯ ಸಂಘರ್ಷ
ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಶ್ರಿತ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ಜು:1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಯಿತು.
ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ. ಎಸ್. ಪಿ.ರಾಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಸ್ಥೆಯ ಸಂಸ್ಥಾಪಕ ಕಾರ್ಯಾಧ್ಯಕ್ಷ ಬಿ.ಎಲ್. ರಂಗಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿದರು.
ಪೂರ್ವ ಪ್ರಾಥಮಿಕ ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಪಡೆದು ಈಗ ಪ್ರಸ್ತುತ ವೈದ್ಯ ವೃತ್ತಿ ಅಲಂಕರಿಸಿರುವ ಹಲವಾರು ವೈದ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ವಿದ್ಯಾ ಸಂಸ್ಥೆಯ ಹಳೆಯ ವಿದ್ಯಾರ್ಥಿ ವೃತ್ತಿಯಲ್ಲಿ ವೈದ್ಯರುಗಳಾದ ಡಾ: ರಕ್ಷಿತ್, ಡಾ: ಅರುಣ್ ಜಿ.ಎಸ್. ಆರಾಧ್ಯ ಡಾ: ರೂಪ.ಬಿ.ಎಂ, ಡಾ: ಯಶವಂತ್, ಡಾ: ಕಾಂತೇಶ್. ಜೆ. ಕುಮಾರ್ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ವಿದ್ಯಾ ಸಂಸ್ಥೆಯಲ್ಲಿ ಸುದೀರ್ಘ 23 ವರ್ಷಗಳ ಕಾಲ ಸಹಶಿಕ್ಷಕ ರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಸುರೇಖಾ.ಡಿ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ವಿದ್ಯಾ ಸಂಸ್ಥೆಯ ಹಲವು ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕ ವರ್ಗದವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕರುಗಳಾದ ಆಶಾ ಪ್ರಾರ್ಥಿಸಿದರು, ರವಿ ಸ್ವಾಗತಿಸಿದರೆ, ದೈಹಿಕ ನಿರ್ದೇಶಕ ಶಿವಲಿಂಗೇಗೌಡರು ಕಾರ್ಯಕ್ರಮ ನಿರೂಪಿಸಿದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ +919743225795