ವಿಜಯ ಸಂಘರ್ಷ
ಶಿಕಾರಿಪುರ : ಶಾಲೆಗಳಲ್ಲಿ ಅಡಿಗೆ ಸಹಾಯಕರಾಗಿ ಕೆಲಸ ಮಾಡಿಸುತ್ತಿರುವ ಅಕ್ಷರದಾಸೋಹದ ನೌಕರರ ಸಂಘದ ವತಿಯಿಂದ ಪಟ್ಟಣದ ತಾಲೂಕು ಪಂಚಾ ಯಿತಿ ಎದುರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಹನುಮಮ್ಮ ರವರು ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಅಡಿಗೆ ಸಹಾಯಕ ರಾಗಿ ಕಾರ್ಯನಿರ್ವಹಿಸುತ್ತಿರುವ ನೌಕರ ರನ್ನು ಖಾಯಂ ಗೊಳಿಸಿ ವೇತನವನ್ನು ಹೆಚ್ಚಿಸುವ ಮೂಲಕ ಸರ್ಕಾರ ಚುನಾವಣಾ ಪೂರ್ವದಲ್ಲಿ ನುಡಿದಂತೆ 6,000 ಮಾಸಿಕ ವೇತನ ನೀಡಬೇಕು, ಹಾಗೂ ಹಿಂದಿನ ಸರ್ಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ರವರು ರೂ.1000 ಹಣವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಬೆಂಗಳೂರಿನಲ್ಲಿ ನಡೆದ ಹೋರಾಟದಲ್ಲಿ ಪಾಲ್ಗೊಂಡು ಹೇಳಿಕೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಅಧ್ಯಕ್ಷೆ ಜಯಮ್ಮ ಮಾತನಾಡಿ ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಘೋಷಿ ಸಿದ 1000 ರೂಗಳನ್ನು ಕೂಡಲೇ ಸಿದ್ದರಾಮಯ್ಯರವರ ಸರ್ಕಾರ ಬಿಡುಗಡೆ ಗೊಳಿಸಿ ಸರ್ಕಾರದಿಂದ ನೀಡುತ್ತಿರುವ ಗೌರವದನ 3700ಗಳಿಂದ 6,000ಗಳಿಗೆ ನಿಗದಿಪಡಿಸುವ ಮೂಲಕ ಅಕ್ಷರ ದಾಸೋಹ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಹಾಗೂ 60 ವರ್ಷ ದಾಟಿದ ಅಡುಗೆ ಸಹಾಯಕ ನೌಕರರಿಗೆ ಮಾಶಾಸನ ನೀಡುವ ಮೂಲಕ ಹಿಡಿ ಗಂಟು ನೀಡಬೇಕು, ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ವೇತನ ನೀಡುವ ಮೂಲಕ ಅಕ್ಷರ ದಾಸೋಹ ನೌಕರರ ಹಿತ ಕಾಪಾಡ ಬೇಕು ಎಂದು ಆಗ್ರಹಿಸಿ ತಾಲೂಕು ಪಂಚಾಯಿತಿ ನಿರ್ವಹಣಾಧಿಕಾರಿಗಳ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಹನುಮಮ್ಮ, ತಾಲೂಕು ಅಧ್ಯಕ್ಷೆ ಜಯಮ್ಮ, ತಾಲೂಕು ಪ್ರಧಾನ ಕಾರ್ಯದರ್ಶಿ ಸೂರ್ಯಕಲಾ, ಮೀನಮ್ಮ, ರೂಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795