ವಿಜಯ ಸಂಘರ್ಷ
ಭದ್ರಾವತಿ: ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದ ತಂದೆಯೊಬ್ಬರಿಗೆ ಬರೋಬ್ಬರಿ 25 ಸಾವಿರ ರು. ದಂಡ ವಿಧಿಸಿರುವ ಘಟನೆ ನಡೆದಿದೆ.
ಜನ್ನಾಪುರ ನಿವಾಸಿ ಶ್ರೀಕಾಂತ್(45) ಎಂಬುವರು ತಮ್ಮ 16 ವರ್ಷದ ಪುತ್ರನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದರು. ನ್ಯೂಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ, ಠಾಣಾಧಿಕಾರಿ ರಮೇಶ್ ರವರು ವಾಹನ ತಪಾಸಣಾ ಕಾರ್ಯ ನಡೆಸುತ್ತಿದ್ದಾಗ ಸಿಕ್ಕಿ ಬಿದ್ದಿದ್ದು, ವಾಹನ ಚಾಲನಾ ಪರವಾನಿಗೆ ಇಲ್ಲದಿರುವುದು ಹಾಗು ಆತ ಅಪ್ರಾಪ್ತ ವಯಸ್ಸಿನವನಾಗಿರುವುದು ಬೆಳಕಿಗೆ ಬಂದಿದೆ.
ಈ ಹಿನ್ನೆಲೆಯಲ್ಲಿ ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ, ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ತದನಂತರ ಪ್ರಕರಣದ ಕುರಿತಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾ ರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನಗರದ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಶ್ರೀಕಾಂತ್‌ರವರಿಗೆ 25 ಸಾವಿರ ರೂ. ದಂಢ ವಿಧಿಸಿ ಆದೇಶ ಹೊರಡಿಸಿದ್ದಾರೆ.
Tags:
ಅಪ್ರಾಪ್ತ ಬಾಲಕ ಬೈಕ್ ರೈಡ್