ಸಚಿವರ ಸಭೆಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಜರುಗಿಸಿ: ರಮೇಶ್ ಶೆಟ್ಟಿ ಆಗ್ರಹ

ವಿಜಯ ಸಂಘರ್ಷ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ರಾದ ಎಸ್ ಮಧುಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ ನಿನ್ನೆ ದಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಮತ್ತು ಅಡಕೆ ಬೆಳೆಯ ಎಲೆಚುಕ್ಕಿ ರೋಗದ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಏಕಾಏಕಿ ಸಭಾಂಗಣ ದೊಳಗೆ ನುಗ್ಗಿ ದಾಂಧಲೆ ನಡೆಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಕಾನೂನು ರೀತ್ಯಾ ಸೂಕ್ತಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಇಲಾಖೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ರಮೇಶ್ ಶೆಟ್ಟಿ ಆಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಕಳೆದ ವಾರದಿಂದ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅವ್ಯಸ್ತವಾಗಿದ್ದು, ಪ್ರಾಕೃತಿಕಹಾನಿಯಿಂದಾಗಿ ಜಿಲ್ಲೆಯಲ್ಲಿ ಆನೇಕ ಮನೆಗಳು ಬಿದ್ದಿವೆ, ಹಲವೆಡೆ ವಿದ್ಯುತ್ ಸಂಪರ್ಕ ಕಡಿತ ಗೊಂಡಿದೆ. ಕೆಲವಡೆ ರಸ್ತೆ, ಸೇತುವೆ, ಬೆಳೆ ಹಾನಿ ಆಗಿದೆ. ಅಡಿಕೆ ಬೆಳೆಗಳಿಗೆ ಎಲೆ ಚುಕ್ಕಿ ರೋಗ ತಗುಲಿ ರೈತರುಗಳು ಆತಂಕದಲ್ಲಿ ದ್ದಾರೆ. ಇಂತಹ ಗಂಭೀರವಾದ ವಿಚಾರಗಳ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಸಭಾಂಗಣದೊಳಗೆ ನುಗ್ಗಿ ಪ್ರತಿಭಟನೆ ಮಾಡಿರುವುದು ಖಂಡನೀಯ.

ಜಿಲ್ಲೆಯ ಪ್ರಸ್ತುತ ಸಮಸ್ಯೆಗಳ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದಿದ್ದರೆ ಆ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಬಹುದಿತ್ತು, ಅದನ್ನು ಬಿಟ್ಟು ಪ್ರಚಾರ ಕ್ಕಾಗಿ ಈ ರೀತಿಯ ಪ್ರತಿಭಟನೆಗೆ ಮುಂದಾಗಿದ್ದಾರೆಂದು ಕಿಡಿಕಾರಿದ್ದರು.
ಸಭೆಯ ಆರಂಭದ ಮುಂಚಿತವಾಗಿಯೇ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಆವರಣಕ್ಕೆ ಆಗಮಿಸಿದ್ದನ್ನು ಗಮನಿಸಿದ್ದರು, ಸೂಕ್ತ ಬಂದೋಬಸ್ತು ಕೈಗೊಳ್ಳದೆ ಬಿಜೆಪಿ ಕಾರ್ಯಕರ್ತರು ಸಭಾಂಗಣದೊಳಗೆ ನುಗ್ಗಲು ಅವಕಾಶ ಮಾಡಿಕೊಟ್ಟದ್ದು ಪೊಲೀಸ್ ಇಲಾಖೆಯ ಭದ್ರತಾ ವೈಪಲ್ಯಕ್ಕೆ ಸಾಕ್ಷಿಯಾಗಿದೆ. ಪ್ರತಿಭಟನಕಾರರನ್ನು ಸ್ವತ: ಪೊಲೀಸ್ ವರಿಷ್ಠಾಧಿಕಾರಿಯೇ ಹೊರಕ್ಕೆ ಕಳುಹಿಸುತ್ತಿದ್ದದ್ದು ಕಂಡು ಬಂತು. ಇಂತಹ ಬೇಜವಾಬ್ದಾರಿ ಪೊಲೀಸ್ ಅಧಿಕಾರಿಯ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆಯು ಸಹಾ ಪೋಲಿಸ್ ವರಿಷ್ಠಾಧಿಕಾರಿಯನ್ನು ರಮೇಶ್ ಶೆಟ್ಟಿ ತಮ್ಮ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು