ವಿಜಯ ಸಂಘರ್ಷ
ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಘೋಷಿಸಿರುವುದನ್ನು ಆಲ್ ಇಂಡಿಯಾ ಕ್ಯಾಥೋಲಿಕ್ ಯೂನಿಯನ್ (AICU) ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.
ಬಹಳ ವರ್ಷಗಳಿಂದ ಕ್ರೈಸ್ತರ ಬೇಡಿಕೆ ಮತ್ತು ನಿರೀಕ್ಷೆಯಾಗಿದ್ದ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಸ್ಥಾಪನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಈ ವರ್ಷದ ಬಜೆಟ್‌ನಲ್ಲಿ 100 ಕೋಟಿ ಅನುದಾನ ನೀಡುವುದ ರೊಂದಿಗೆ ಘೋಷಿಸಿರುವ ಸರ್ಕಾರಕ್ಕೆ ಸಂಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಸತಿ,ವಕ್ಟ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಕೆ.ಜೆ.ಜಾರ್ಜ್ ರವರಿಗೆ ಹಾಗೂ ಸಂಪುಟದ ಎಲ್ಲ ಸಚಿವ ರಿಗೆ AICU ರಾಜ್ಯ ಪ್ರಧಾನ ಕಾರ್ಯದರ್ಶಿ ಅಂತೋಣಿ ವಿಲ್ಸನ್ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ :+919743225795
Tags:
Chirstian Board