ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ವಸೂಲಿ: ಶಶಿಕುಮಾರ್ ಆರೋಪ

ವಿಜಯ ಸಂಘರ್ಷ
ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ನಿಗದಿ ಮಾಡಿರುವ ಜಾಗಗಳಲ್ಲಿ ಗ್ರಾಮ ಒನ್ ಹಾಗೂ ಸಿಎಸ್‌ಸಿ ಸೆಂಟರ್ ಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರ ಬಳಿ ಗ್ರಾಮ ಒನ್ ಮತ್ತು ಸಿಇಸಿ ಸೆಂಟರ್ ಗಳಲ್ಲಿ ನೂರು ರೂ ಗಳಿಂದ 200 ರೂಪಾಯಿಗಳವರೆಗೂ ಹಣವನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು
ಶಶಿಕುಮಾರ್ ಎಸ್ ಗೌಡ ಆರೋಪಿಸಿದರು.
ಸೋಮವಾರ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದರು.

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಉಚಿತವಾಗಿ ನೋಂದಣಿಗೆ ರಾಜ್ಯ ಸರ್ಕಾರ ಅದೇಶಿಸಿದ್ದು, ಕೆಲವು ಸಿಇಸಿ ಕೇಂದ್ರಗಳಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದು ಖಂಡನೀಯ ಎಂದರು.

ಹಲವು ಜಿಲ್ಲೆಗಳಲ್ಲಿ ಹಣ ವಸೂಲಿ ಮಾಡಿದ ಅಂಗಡಿಗಳ ಮೇಲೆ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್ ರವರು ಸಿಇಸಿ ಕೇಂದ್ರಗಳನ್ನು ರದ್ದು ಮಾಡಿದ ಸನ್ನಿವೇಶ ಕಾಣಬಹುದು. ಆದರೆ ಭದ್ರಾವತಿಯ ಅಂಗಡಿಗಳಲ್ಲಿ ಹಣ ವಸೂಲಿ ಮಾಡುತ್ತಿರು ವುದು ತಾಲ್ಲೂಕು ಆಡಳಿತದ ಗಮನಕ್ಕೆ ಬಂದಿಲ್ಲವೇ ಎಂದು ಪ್ರಶ್ನಿಸಿದರು.
ಕೂಡಲೇ ತಾಲ್ಲೂಕು ಕೇಂದ್ರಗಳ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳು ಮೇಲ್ಕಂಡ ಎಲ್ಲಾ ಸೆಂಟರ್ ಗಳ ಮುಖ್ಯಸ್ಥ ರನ್ನು ಕರೆದು ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರ ಬಳಿ ಹಣ ಸುಲಿಗೆ ಮಾಡದಂತೆ ಸೂಚಿಸಬೇಕು, ಇಲ್ಲವಾದಲ್ಲಿ ಸರ್ಕಾರದ ಉತ್ತಮವಾದ ಯೋಜನೆ ಹಳ್ಳ ಹಿಡಿಯುವುದು ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ತಹಸೀಲ್ದಾರ್ ಅವರು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಎಚ್ಚರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು