ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ: ಸತೀಶ್

ವಿಜಯ ಸಂಘರ್ಷ
ಶಿವಮೊಗ್ಗ: ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವಲ್ಲಿ, ಬೌದ್ಧಿಕ ಶಕ್ತಿ ಹಾಗೂ ಸಾಂಸ್ಕೃತಿಕ ಆಸಕ್ತಿ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ ಎಂದು ರೋಟರಿ ಪೂರ್ವ ಸಂಸ್ಥೆ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ರಾಜೇಂದ್ರ ನಗರದ ರೊಟರಿ ಸಭಾಂಗಣ ದಲ್ಲಿ ರೋಟರಿ ಪೂರ್ವ ವತಿಯಿಂದ ಆಯೋಜಿಸಿದ್ದ ಇಂಟರ‍್ಯಾಕ್ಟ್ ಕ್ಲಬ್ ಪದಗ್ರಹಣ, ಪ್ರತಿಭಾ ಪುರಸ್ಕಾರ, ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ ನಾಯಕತ್ವ ಗುಣ ಹಾಘೂ ಸೇವಾ ಮನೋಭಾವನೆ ಬೆಳೆಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಕಾರಿ ಆಗಿದೆ ಎಂದು ತಿಳಿಸಿದರು.

ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಇಂಟರ‍್ಯಾಕ್ಟ್ ಕ್ಲಬ್‌ಗಳಲ್ಲಿ ಭಾಗವಹಿಸುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ ವಿದೇಶದ ವಿದ್ಯಾರ್ಥಿ ಗಳೊಂದಿಗೆ ಸಂವಹನ ನಡೆಸಲು ವೇದಿಕೆ ದೊರಕುತ್ತದೆ. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಹೈಸ್ಕೂಲ್ ವಿಭಾಗ ದಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿ ಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಡಿಕ್ಷನರಿ ಹಾಗೂ ನಗದು ಬಹುಮಾನ, ಲೇಖನಗಳನ್ನು ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.

ಇಂಟರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಹರ್ಷಿತ್, ಕಾರ್ಯದರ್ಶಿ ಗಾನವಿ ಅವರು ಪದಾಧಿಕಾರಿಗಳೊಂದಿಗೆ ಅಧಿಕಾರ ಸ್ವೀಕರಿಸಿದರು. ಅಬ್ದುಲ್ ಕಲಾಂ ಸ್ಪೇಸ್ ಕ್ಲಬ್ ಜಿಲ್ಲಾ ಘಟಕದ ಚೇರ‍್ಮನ್ ಡಾ. ಪರಮೇಶ್ವರ್ ಶಿಗ್ಗಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಡಿ.ನಾಗವೇಣಿ, ಪ್ರಾಚಾರ್ಯ ಸೂರ್ಯನಾರಾಯಣ, ಮಾಜಿ ಅಧ್ಯಕ್ಷ ಗಣೇಶ್, ಪ್ರಜ್ವಲ್, ನರಸಿಂಹಯ್ಯ, ಸುಷ್ಮಾ ಎಲ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು