ಧರ್ಮ-ಜಾತಿ ಮೀರಿದ ಮಾನವೀಯ ಸಮಾಜ ನಿರ್ಮಾಣವಾಗಬೇಕು: ಪ್ರಕಾಶ್ ರಾಜ್

ವಿಜಯ ಸಂಘರ್ಷ
ಭದ್ರಾವತಿ: ಪ್ರತಿಯೊಬ್ಬರಲ್ಲೂ ವಿಶ್ವ ಮಾನವ ಭಾವನೆಗಳು ಬೆಳೆಯಬೇಕು. ಧರ್ಮ, ಜಾತಿ ಎಲ್ಲವನ್ನು ಮೀರಿದ ಮಾನವೀಯ ಸಮಾಜ ನಿರ್ಮಾಣ ವಾಗಬೇಕು ಎಂದು ಬಹುಭಾಷ ನಟ ಪ್ರಕಾಶ್ ರಾಜ್ ಹೇಳಿದರು.

ಅವರು ಮಂಗಳವಾರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ ಸಹಯೋಗ ದೊಂದಿಗೆ ನ್ಯೂಟೌನ್‌ ಸರ್‌.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯಕಾಲೇಜಿನಲ್ಲಿ ರಂಗಭೂಮಿ, ಸಿನಿಮಾ ಮತ್ತು ಸಮಾಜ ವಿಷಯ ಕುರಿತು ಹಮ್ಮಿಕೊಳ್ಳಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ದೇಹದಲ್ಲಿ ಆಗುವ ಗಾಯಗಳನ್ನು ಬೇಗ ಗುಣ ಮಾಡಿಕೊಳ್ಳಬಹುದು, ಆದರೆ ದೇಶ ಮತ್ತು ಸಮಾಜದ ಮೇಲೆ ಆಗುತ್ತಿರುವ ಗಾಯಗಳನ್ನು ಸರಿಪಡಿಸಿಕೊಳ್ಳದೆ ಹೋದರೆ ದೇಶ ಮತ್ತು ಸಮಾಜ ಅಧೋಗತಿಗೆ ಇಳಿಯುತ್ತದೆ, ಪ್ರಸ್ತುತ ದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಯುವಕರು ಎಚ್ಚರಿಕೆಯಿಂದ ಇರಬೇಕೆಂದು ಕಿವಿ ಮಾತು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ಪ್ರೊ.ಎಂ. ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ.ಎಲ್‌.ಅಶೋಕ್‌, ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಚಿನ್ನಯ್ಯ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್‌, ಮಾಜಿ ಸದಸ್ಯ ಬಾಲಕೃಷ್ಣ, ಕಾರುಣ್ಯ ಚಾರಿಟಬಲ್‌ಟ್ರಸ್ಟ್‌ ಅಧ್ಯಕ್ಷ ಜಿ. ರಾಜು ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಶೈಲಜಾ ಹೊಸಳ್ಳೇರ ಹಾಗೂ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು