ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ

ವಿಜಯ ಸಂಘರ್ಷ
ಸಾಗರ: ತಾಲ್ಲೂಕಿನ ತುಮರಿ ಗ್ರಾಮ ಪಂಚಾಯ್ತಿಯಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾ ಪಂ ಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಯನ್ನು ಸಾಗರ
ತಾ ಪಂ ಕಚೇರಿಯವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿಗಾಗಿ ಮೊ.ಸಂ: 9535247757 ಸಂಪರ್ಕಿಸಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು