ವಿಜಯ ಸಂಘರ್ಷ
ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆಯಲ್ಲಿ ಚಿರತೆ ಮರಿಯೊಂದು ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಕಾರ್ಖಾನೆಯಲ್ಲಿ ಕಳೆದ ಎರಡು ಮೂರು ತಿಂಗಳುಗಳಿಂದ ಚಿರತೆ ಕಾಣಿಸಿಕೊಂಡಿದ್ದು,
ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ ಚಿರತೆ ಇರುವುದು ಖಚಿತವಾದ ಹಿನ್ನೆಲೆಯಲ್ಲಿ ಬೋನ್ ಇಡಲಾಗಿತ್ತು. ಚಿರತೆ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಬೋನಿನಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಚಿರತೆಗೆ ಮದ್ದು ಬರುವ ಚುಚ್ಚುಮದ್ದು ನೀಡಿದ್ದು, ಚಿರತೆಯನ್ನು ಅರಣ್ಯಕ್ಕೆ ಬಿಡಲು ಸಿದ್ಧತೆಗಳು ನಡೆದಿವೆ. ನಗರಸಭಾ ಸದಸ್ಯ ಬಿ.ಕೆ. ಮೋಹನ್,ತಹಸೀಲ್ದಾರ್ ನಾಗರಾಜ್, ಕಾರ್ಖಾನೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳಿದ್ದರು.
ಆಡಳಿತ ಮಂಡಳಿ ಅಧಿಕಾರಿಗಳು ಮತ್ತು ಕಾರ್ಮಿಕರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿತ್ತು. ಅಲ್ಲದೆ
ಆದರೆ ಚಿರತೆ ಮಾತ್ರ ಪತ್ತೆಯಾಗಿರಲಿಲ್ಲ. ಇದೀಗ ಬುಧವಾರ ಬೆಳಗ್ಗೆ ಬೋನಿನಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ತಹಸೀಲ್ದಾರ್ ನಾಗರಾಜ್ ಹಾಗೂ ಕಾರ್ಖಾನೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಆಗಮಿಸಿ ಚಿರತೆಗೆ ಮದ್ದು ಬರುವ ಚುಚ್ಚುಮದ್ದು ನೀಡಿದ್ದು, ಚಿರತೆಯನ್ನು ಅರಣ್ಯಕ್ಕೆ ಬಿಟ್ಟುಬಿಡಲು ಸಿದ್ಧತೆಗಳು ನಡೆದಿವೆ.
ಕಳೆದ ಸುಮಾರು ಒಂದು ವರ್ಷದ ಹಿಂದೆ ಚಿರತೆಯೊಂದು ಕಾರ್ಖಾನೆಗಯ ವಸತಿ ಗೃಹದಲ್ಲಿ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು 8 ಗಂಟೆಗಳ ಕಾಲ ಕಾರ್ಯಾಚರಣೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು.