ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ: ತಾತ್ಕಾಲಿಕ ಪರ್ಯಾಯ ಮಾರ್ಗ

ವಿಜಯ ಸಂಘರ್ಷ
ಭದ್ರಾವತಿ: ತಾಲ್ಲೂಕಿನ ಮಸರಹಳ್ಳಿ- ಭದ್ರಾವತಿ ರೈಲ್ವೆ ಸ್ಟೇಷನ್ ನಡುವೆ ಬರುವ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್ ನಂ:29 ಕಿ.ಮಿ :41/200-300 ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಸೆ: 30 ರಿಂದ ಅ: 2 ರವರೆಗೆ ಗೇಟ್ ಮುಚ್ಚಲಾಗುತ್ತಿದೆ.

ಈ ಹಿನ್ಬಲೆಯಲ್ಲಿ ಪರ್ಯಾಯ ಮಾರ್ಗ ಕಲ್ಪಿಸಲಾಗುತ್ತಿದೆ. ರೈಲ್ವೇ ಲೆವೆಲ್ ಕ್ರಾಸಿಂಗ್ ನಂ.30 ಕಿ.ಮೀ. 42/100-200ರ ಮೂಲಕ ವಾಹನ ಸಂಚರಿಸಲು ಕಲ್ಪಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಅ: 2 ರವರೆಗೆ ಭದ್ರಾವತಿ ಯಿಂದ ಮಸರಹಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್–ಅಂತರಗಂಗೆ -ಮಸರಹಳ್ಳಿಗೆ ಅಥವಾ ಬಾರಂದೂರು- ಹಳ್ಳಿಕೆರೆ- ಮಸರಹಳ್ಳಿ ಮೂಲಕ ಪರ್ಯಾಯ ಮಾರ್ಗದಲ್ಲಿ ಸಂಚರಿಸ ಬಹುದಾಗಿರುತ್ತದೆ.

ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರೈಲ್ವೆ ಲೆವಲ್ ಕ್ರಾಸಿಂಗ್ ಗೇಟ್‍ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳ ಬೇಕಾಗಿರುವುದರಿಂದ ತಾತ್ಕಾಲಿಕವಾಗಿ ಈ ಮೇಲ್ಕಂಡ ದಿನಾಂಕಗಳಲ್ಲಿ ಮಾತ್ರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು