ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ: ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಜಯ ಸಂಘರ್ಷ
ಭದ್ರಾವತಿ: ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಸಹಯೋಗದೊಂದಿಗೆ ಮಂಗಳೂರಿ ನಲ್ಲಿ ನಡೆದ ರಾಜ್ಯಮಟ್ಟದ 52 ಕೆ.ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆ (Power lifting) ಯಲ್ಲಿ ಸಾನಿಯಾ ಎಂ ಪ್ರಥಮ ಸ್ಥಾನವನ್ನು ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿರುವ ಈಕೆಗೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

1 ಕಾಮೆಂಟ್‌ಗಳು

ನವೀನ ಹಳೆಯದು