ಜಯ ಕರ್ನಾಟಕ ಜನಪರ ವೇದಿಕೆ ಶ್ರೀಗಂದ ಸಸಿ ನೆಡುವ ಕಾರ್ಯಕ್ರಮ

ವಿಜಯ ಸಂಘರ್ಷ
ಭದ್ರಾವತಿ: ಜಯ ಕರ್ನಾಟಕ ಜನಪರ ವೇದಿಕೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಶ್ರೀಗಂಧ ಸಸಿಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಗರದ ಸಂಚಾರಿ ಪೊಲೀಸ್ ಠಾಣೆ ಆವರಣದಲ್ಲಿ ಯುವ ಮುಖಂಡ ಬಿ.ಎಸ್ ಗಣೇಶ್ ಹಾಗು ಸಂಚಾರಿ ಠಾಣಾಧಿಕಾರಿ ಶಾಂತಲ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಎಸ್.ಕೆ ರಘುವೀರ್ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲಿಗಿ ಕೃಷ್ಣ, ತಾಲೂಕು ಅಧ್ಯಕ್ಷ ಜಗದೀಶ್, ಮುಖಂಡರಾದ ಹರಿನಾಥ ಸಿಂಗ್, ದಿನೇಶ ಶೇಟ್, ನವೀನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು