ವಿಐಎಸ್ ಎಲ್ ಕಾರ್ಖಾನೆ ಉಳಿವಿಗಾಗಿ ಶ್ರೀ ವಿನಾಯಕನ ಸನ್ನಿದಿಯಲ್ಲಿ ಗಣಹೋಮ

ವಿಜಯ ಸಂಘರ್ಷ
ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ವೃತ್ತದಲ್ಲಿ 13ನೇ ವರ್ಷದ ವಿನಾಯಕ ಚತುರ್ಥಿ ಅಂಗವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಶುಕ್ರವಾರ ಗಣಹೋಮ ನಡೆಯಿತು.  

ಕಾಗದನಗರ ನಾಗರಕಟ್ಟೆ ದೇವಸ್ಥಾನದ ಕಿರಿಯ ಅರ್ಚಕರಾದ ಚಿನ್ಮಯಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಕಾರ್ಖಾನೆ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಗುತ್ತಿಗೆ ಕಾರ್ಮಿಕರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು.
 
ಕಾರ್ಖಾನೆ ಉಳಿವಿಗಾಗಿ ಈ ಹಿಂದೆ ಶಿವಮೊಗ್ಗದಿಂದ ವಿಐಎಸ್‌ಎಲ್ ಕಾರ್ಖಾನೆವರೆಗೂ ಪಾದಯಾತ್ರೆ ಕೈಗೊಂಡಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿ
ಡಾ.ನೇತ್ರಾವತಿ, ನಗರಸಭೆ ಮಾಜಿ ಸದಸ್ಯ ಆಂಜನಪ್ಪ, ಮುಖಂಡರಾದ ಮರಿಯಪ್ಪ, ಪ್ರದೀಪ್, ರಾಧಾ, ರಾಮಕೃಷ್ಣ, ಸೇರಿದಂತೆ ಇನ್ನಿತರರು ವಿನಾಯಕ ಮೂರ್ತಿ ದರ್ಶನ ಪಡೆದರು. ವಿನಾಯಕ ಸೇವಾ ಸಮಿತಿ ವತಿಯಿಂದ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್.ರವಿಕುಮಾರ್, ರಮೇಶ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಗಣಹೋಮ ಪೂರ್ಣಾಹುತಿ ನಂತರ ಅನ್ನಸಂತರ್ಪಣೆ ನೆರವೇರಿತು. ಅ.28ರ ಶನಿವಾರ ವಿನಾಯಕ ಮೂರ್ತಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು