ಜಿಲ್ಲಾ ಉಸ್ತುವಾರಿ ಸಚಿವ ರಿಂದ ಕ್ಷೇತ್ರ ನಿರ್ಲಕ್ಷ್ಯ: ಬಿ.ಎನ್.ರಾಜು ಆರೋಪ

ವಿಜಯ ಸಂಘರ್ಷ
ಭದ್ರಾವತಿ: ಎಲ್ಲಾ ಧರ್ಮದವರ ಹಿತ ಚಿಂತಕರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ 90 ನೇ ಜನ್ಮ ದಿನಾಚರಣೆ ಹಾಗು ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೇತ್ರದ ನಿರ್ಲಕ್ಷ್ಯ ಖಂಡಿಸಿ ಮಂಗಳವಾರ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಹಳೇನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ಕೇವಲ ಶಿವಮೊಗ್ಗ, ಸಾಗರ, ಸೊರಬ ಕ್ಷೇತ್ರಗಳಿಗೆ ಮಾತ್ರ ಪದೇ ಪದೇ ಭೇಟಿ ನೀಡುತ್ತಿದ್ದು, ಆದರೆ ಈ ಕ್ಷೇತ್ರಕ್ಕೆ ಇದುವರೆಗೂ ಭೇಟಿ ನೀಡದೆ ನಿರ್ಲಕ್ಷಿಸುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು