ವಿಜಯ ಸಂಘರ್ಷ
ಭದ್ರಾವತಿ: ಮೊಬೈಲ್ ವಿಚಾರಕ್ಕೆ ಯುವಕ ನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತ ನಗರದಲ್ಲಿ ನಡೆದಿದೆ.
ಹೊಸಮನೆ ಹನುಮಂತನಗರ ನಿವಾಸಿ ನಂದಕುಮಾರ್ (38) ಚಾಕು ಇರಿತ ಕ್ಕೊಳಗಾದ ವ್ಯಕ್ತಿ.
ಮೊಬೈಲ್ ವಿಚಾರವಾಗಿ ನಂದಕುಮಾರ್ ಏರಿಯಾದ ಯುವಕರ ಗುಂಪಿನ ನಡುವೆ ಜಗಳ ನಡೆದಿದೆ. ಈ ವೇಳೆ, ಈ ಗುಂಪು ನಂದಕುಮಾರ್ ಬೆನ್ನಿಗೆ ಚಾಕುವಿನಿಂದ ಇರಿದಿದೆ. ಗಂಭೀರ ಗಾಯಗೊಂಡ ನಂದಕುಮಾರ್ ಅವರನ್ನು ಕೂಡಲೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ ಪಿ ಮಿಥುನ್ ಕುಮಾರ್, ನಂದಕುಮಾರ್ ಎಂಬವರ ಮೇಲೆ ಹಲ್ಲೆ ನಡೆಸಿದೆ. ಸದ್ಯ ಅವರು ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ವೈಯಕ್ತಿಕ ಕಾರಣಕ್ಕೆ ಈ ಗಲಾಟೆ ನಡೆದಿದೆ. ಪ್ರಕರಣ ಸಂಬಂಧ ಸದ್ಯ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.