ಚಿನ್ನದ ಸರ ಕದ್ದೊಯ್ದಿದ್ದ ಆರೋಪಿ 24ಗಂಟೆಯೊಳಗೆ ಅರೆಸ್ಟ್

ವಿಜಯ ಸಂಘರ್ಷ
ಭದ್ರಾವತಿ: ಚಿನ್ನದ ಸರವನ್ನು ಕದ್ದೊಯ್ದಿದ್ದ ಆರೋಪಿಯನ್ನು 24ಗಂಟೆಯೊಳಗೆ ಬಂಧಿಸುವಲ್ಲಿ ನ್ಯೂಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಅರೋಪಿಯಿಂದ ಅಂದಾಜು 4,50,000/- ರು. ಮೌಲ್ಯದ 88 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ವಿವರ: ನ.6 ರಂದು ಬೆಳಗ್ಗೆ ಕಡದಕಟ್ಟೆಯ ಮಹಿಳೆಯೊಬ್ಬರ ಮನೆಗೆ ಆಕೆಯ ಗಂಡನ ಅಣ್ಣನ ಮಗ ನಾಗರಾಜನ ಎಂಬಾತ ಬಂದಿದ್ದು ಈತ ತನ್ನ ಬಳಿ ಇದ್ದ ಟವಲ್ ತೆಗೆದುಕೊಂಡು ಮಹಿಳೆಯ ಕುತ್ತಿಗೆಗೆ ಬೀಗಿದು ಆಕೆಯ ಕುತ್ತಿಗೆಯಲ್ಲಿದ್ದ ಬಂಗಾರದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ಮಹಿಳೆಯು ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
            
ಪ್ರಕರಣ ದಾಖಲಾದ 24 ಗಂಟೆಯ ಒಳಗಾಗಿ ನ್ಯೂಟೌನ್ ಪೊಲೀಸರ ತಂಡವು ಆರೋಪಿ ನಾಗರಾಜ ಕೆ ಎನ್ (32)ನನ್ನು ಮಳವಳ್ಳಿ ತಾಲ್ಲೂಕಿನ ಕುರುಬನಪುರ ಗ್ರಾಮದಲ್ಲಿ ಬಂಧಿಸಿದ್ದು, ಆರೋಪಿಯಿಂದ ಸರವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಅರೋಪಿಯನ್ನು ನ್ಯಾಯಾಂಗಬಂಧನಕ್ಕೆ ಒಪ್ಪಿಸಲಾಗಿದೆ.

ಡಿವೈಎಸ್ಪಿ ನಾಗರಾಜ್ ಮಾರ್ಗದರ್ಶನ ದಲ್ಲಿ ಸಿಪಿಐ ಶ್ರೀಶೈಲ ಕುಮಾರ್ ನೇತೃತ್ವದಲ್ಲಿ ಪಿಎಸ್ಐ ರಮೇಶ್. ಟಿ., ಹಾಗು ನ್ಯೂಟೌನ್ ಠಾಣೆ ಸಿಬ್ಬಂದಿಗಳಾದ ಹೆಚ್.ಸಿ. ನವೀನ್, ಮಲ್ಲಿಕಾರ್ಜುನ, ರಾಕೇಶ, ಗೀರೀಶ್ ಮತ್ತು ವಿನೋದ ರವರುಗಳನ್ನು ಒಳಗೊಂಡ ತಂಡ ಆರೋಪಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು