ಕನ್ನಡ ಭಾಷೆಯನ್ನು ಗೌರವಿಸುವುದು ನಾಡಿನ ಪ್ರತಿಯೊಬ್ಬರ ಕರ್ತವ್ಯ: ಬಿ.ಕೆ.ಸಂಗಮೇಶ್ವರ್

ವಿಜಯ ಸಂಘರ್ಷ
ಭದ್ರಾವತಿ: ಆಡಳಿತ ಭಾಷೆ ಹಾಗು ಮಾತೃಭಾಷೆಯಾದ ಕನ್ನಡದ ಬಗೆಗಿನ ಅಭಿಮಾನ ಅಂತರಾಳದಿಂದ ಬರಬೇಕು. ಕನ್ನಡರಾಜ್ಯೋತ್ಸವ ಕೇವಲ ಒಂದು ದಿನದ ಉತ್ಸವವಾಗದೆ ವರ್ಷಪೂರ್ತಿ ನಿತ್ಯೋತ್ಸವ ವಾಗಲು ಜನರ ಮನೋಭಾವ ಹಾಗು ಪ್ರೀತಿ ಮುಖ್ಯ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.

ನಗರದ ಕನಕಮಂಟಪ ಕ್ರೀಡಾಂಗಣ ದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ನಾಡಧ್ವಜ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಾಯಿಯನ್ನು ಗೌರವಿಸುವಂತೆಯೇ ಕನ್ನಡ ಭಾಷೆಯನ್ನು ಗೌರವಿಸುವುದು ಕನ್ನಡನಾಡಿನ ಪ್ರತಿಯೊಬ್ಬರ ಕರ್ತವ್ಯ. ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಗಳನ್ನು ಪಡೆದ ನಾಡು ಕರ್ನಾಟಕ ಎಂಬುದು ಪ್ರತಿಯೊಬ್ಬ ಕನ್ನಡಿಗರ ಹೆಮ್ಮೆ ಎಂದರು.

ತಹಶೀಲ್ದಾರ್ ಕೆ.ಆರ್.ನಾಗರಾಜ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಶೃತಿ ವಸಂತಕುಮಾರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ , ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್, ಸದಸ್ಯೆರಾದ ಬಸವರಾಜ್ ಬಿ ಆನೇಕೊಪ್ಪ, ಮಣಿ, ಚನ್ನಪ್ಪ, ಕಾಂತರಾಜ್, ಸಯ್ಯದ್ ರಿಯಾಜ್, ಲತಾ ಚಂದ್ರಶೇಖರ್, ಶಶಿಕಲಾ ನಾರಾಯಣಪ್ಪ, ಪೌರಾಯುಕ್ತ ಮನುಕುಮಾರ್, ಡಿವೈಎಸ್ಪಿ ಕೆ.ಎನ್.ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ ಕೆ ನಾಗೇಂದ್ರಪ್ಪ ಮತ್ತಿತರರಿದ್ದರು.

ಇದೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು