ವಿಜಯ ಸಂಘರ್ಷ
ಭದ್ರಾವತಿ: ತಾಲೂಕು ಕಚೇರಿಯಲ್ಲಿ ದುರಸ್ಥಿಯಲ್ಲಿರುವ ಲಿಫ್ಟ್ ಕೂಡಲೇ ಸರಿಪಡಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸುವಂತೆ ಕೆಆರ್ ಎಸ್ ಪಕ್ಷದ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಲಿಸ್ಟ್ ಸುಮಾರು ಅರು ಏಳು ತಿಂಗಳಿಂದ ಕೆಟ್ಟು ನಿಂತಿದ್ದರೂ ಸಹ ಕ್ರಮಕ್ಕೆ ಮುಂದಾಗದಿರುವುದು ಖಂಡನೀಯ.ಈ ಹಿಂದಿನ ತಹಸಿಲ್ದಾರ್ ಅವರ ಗಮನಕ್ಕೆ ತಂದು ಸಾರ್ವಜನಿಕರಿಗೆ ಅನಕೂಲ ಮಾಡಿಕೊಡುವಂತೆ ಒತ್ತಾಯಿಸಿದ್ದರು ಸಹ ಯಾವದೇ ದುರಸ್ತಿ ಮಾಡಿಲ್ಲ. ಇದರಿಂದ ಸಾರ್ವಜನಿಕರಿಗೆ ವಯಸ್ಕರಿಗೆ ವಿಶೇಷ ಚೇತನರಿಗೆ ಓಡಾಡಲು ಅನುಕೂಲ ಮಾಡಿಕೊಡಬೇಕೆಂದು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಪ್ರಭು, ನಾಗರಾಜರಾವ್ ಸಿಂಧ್ಯಾ, ತೀರ್ಥ ಮತ್ತಿತರರು ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು.