ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮೀಣ ಸಾರಿಗೆ ಚಾಲನೆ

ವಿಜಯ ಸಂಘರ್ಷ
ಭದ್ರಾವತಿ: ಕ್ಷೇತ್ರದ ಶಾಸಕ
ಬಿ.ಕೆ ಸಂಗಮೇಶ್ವರ್ ರವರ ಪ್ರಯತ್ನದ ಫಲವಾಗಿ ಗ್ರಾಮೀಣ ಪ್ರದೇಶಗಳಿಗೆ ನೂತನವಾಗಿ ಸರ್ಕಾರಿ ಬಸ್ ಸಂಚಾರಕ್ಕೆ ಬುಧವಾರ ಚಾಲನೆ ನೀಡಲಾಯಿತು.
ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನಗರಸಭಾಧ್ಯಕ್ಷೆ ಕೆ.ಜಿ ಶೃತಿ ಸಿ.ವಸಂತ ಕುಮಾರ್ ಟೇಪು ಕತ್ತರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯ ಬಿ.ಕೆ ಮೋಹನ್ ಪ್ರತಿನಿತ್ಯ ಕುವೆಂಪು ವಿವಿಗೆ ಭದ್ರಾವತಿಯಿಂದ ನೂರಾರು ವಿದ್ಯಾರ್ಥಿಗಳು ಓಡಾಡುತ್ತಿದ್ದು ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದಿರುವುದು ಅಲ್ಲದೆ ಬಹಳ ದಿನಗಳಿಂದ ಬೇಡಿಕೆ ಇದೆ.
ಅಲ್ಲದೆ ಬಾರಂದೂರು, ಕಾರೇಹಳ್ಳಿ ಭಾಗಗಳಿಂದ ಓಡಾಡುವ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ಮನಗಂಡ ಶಾಸಕರು ಬಿಆರ್ ಪಿ, ಶಂಕರಘಟ್ಟ,ಲಕ್ಕವಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡ ಲಾಗಿದೆ. ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಕೋರಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ ಕುಮಾರ್, ಸದಸ್ಯರಾದ ಕಾಂತರಾಜ್, ಲತಾ ಚಂದ್ರಶೇಖರ್, ಟಿಪ್ಪುಸುಲ್ತಾನ್, ಮುಖಂಡರಾದ ಬಿ.ಕೆ ಶಿವಕುಮಾರ್, ಕೆಎಸ್‌ಆರ್‌ಟಿಸಿ ಘಟಕದ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು