ವಿಜಯ ಸಂಘರ್ಷ
ಸಾಗರ: ಗೋಪೂಜೆ ಸಲ್ಲಿಸುವ ಸಮಯ ದಲ್ಲಿ ಹಸುವೊಂದು ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ್ದ ಘಟನೆ ಹೊಸನಗರ ತಾಲೂಕು ಮತ್ತಿಮನೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಇದೀಗ ಪಶುವೈದ್ಯರು ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆ ಚಿನ್ನದ ಸರವನ್ನು ಹೊರತೆಗೆದಿದ್ದಾರೆ.
ಮತ್ತಿಮನೆ ಸತ್ಯವತಿ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಗೋಪೂಜೆಯ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬದವರು ದಿಗಿಲುಗೊಂಡಿದ್ದರು. ನಂತರ ಪರಿಶೀಲಿಸಿದಾಗ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಮನೆಯವರು ಖಚಿತ ಪಡಿಸಿಕೊಂಡಿದ್ದಾರೆ.
ಬಂಗಾರ ಹೋದರೆ ಹೋಗಲಿ ಎಂದು ಸತ್ಯವತಿ ಶ್ಯಾಮ ಉಡುಪ ಸುಮ್ಮನಾಗಿದ್ದರು. ಆದರೆ ಹಲವರ ಬಳಿ ಈ ವಿಚಾರ ಹೇಳಿದಾಗ ಇದು ಹಸುವಿನ ಪ್ರಾಣಕ್ಕೂ ಕುತ್ತು ತರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಅವರ ಆತಂಕಕ್ಕೆ ಕಾರಣವಾಗಿತ್ತು.