ಅದ್ದೂರಿಯಾಗಿ ನೆರವೇರಿದ ರಾಜ್ಯೋತ್ಸವ

ವಿಜಯ ಸಂಘರ್ಷ
ಭದ್ರಾವತಿ: ತಾಲ್ಲೂಕಿನ ಹಿರಿಯೂರು ಗ್ರಾಮದ ನೆಹರು ಆಟೋ ನಿಲ್ದಾಣದ ಚಾಲಕ ಮತ್ತು ಮಾಲೀಕರ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಯುವ ಮುಖಂಡ ಬಿ.ಎಸ್.ಗಣೇಶ್ ಕನ್ನಡ ಧ್ವಜ ನೆರವೇರಿಸಿ ಭುವನೇಶ್ವರಿ ತಾಯಿಗೆ ಪುಷ್ಪ ನಮನ ಸಲ್ಲಿಸಿದರು. ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

 ಈ ಸಂದರ್ಭದಲ್ಲಿ ಸಮಾಜ ಸೇವಕ ಹಾವು ಮಂಜ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು