ವಿಐಎಸ್ಎಲ್ ಕಾರ್ಖಾನೆಗೆ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ

ವಿಜಯ ಸಂಘರ್ಷ
ಭದ್ರಾವತಿ: ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರು ಸೋಮವಾರ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶತಮಾನೋತ್ಸವ ಕಾರ್ಯಕ್ರಮದಲ್ಲಿ ಗುತ್ತಿಗೆ, ಕಾಯಂ ಹಾಗು ನಿವೃತ್ತ ನೌಕರರು ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರವರಿಗೆ ಮನವಿ ಸಲ್ಲಿಸಿ ಮೈಸೂರು ಮಹಾರಾಜರ ಕೊಡುಗೆಯಾಗಿರುವ ವಿಐಎಸ್‌ಎಲ್ ಕಾರ್ಖಾನೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಜ್ಯ ಹಾಗು ಕೇಂದ್ರ ಸರ್ಕಾರಗಳಿಗೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಖಾನೆ ಆಡಳಿತ ಕಚೇರಿಯಲ್ಲಿ ಒಡೆಯರ್‌ರವರನ್ನು ಸನ್ಮಾನಿಸಿ, ಗೌರವಿಸಲಾಯಿತು.

1 ಕಾಮೆಂಟ್‌ಗಳು

ನವೀನ ಹಳೆಯದು