ಸಂವಿಧಾನ ದಿನಾಚರಣೆ: ಪ್ರತಿಜ್ಞಾ ವಿಧಿ ಸ್ವೀಕಾರ

ವಿಜಯ ಸಂಘರ್ಷ
ಭದ್ರಾವತಿ: ನಗರದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪೌರ ಸೇವಾ ನೌಕರರ ಸಂಘದ ಅಧ್ಯಕ್ಷ ಚೇತನ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.

ದಸಂಸ ಜಿಲ್ಲಾ ಸಂಚಾಲಕ ಚಿನ್ನಯ್ಯ, ಸಂಘದ ಪ್ರಮುಖರಾದ ಹೇಮಂತ್, ಅರ್ಜುನ್ ಮೊರೆ, ನರಸಿಂಹ ಮೂರ್ತಿ, ಗೋವಿಂದ ಸೇರಿದಂತೆ ಮತ್ತಿತರರಿದ್ದರು.

ಈ ಸಂದರ್ಭದಲ್ಲಿ ಸಂವಿಧಾನದ ರಚನೆ, ಮಹತ್ವ ಮತ್ತು ಅದರ ಆಶಯಗಳ ಕುರಿತು ವಿವರಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು