ಜ.2: ತಾಲ್ಲೂಕು 10 ನೇ ಕನ್ನಡ ಸಾಹಿತ್ಯ ಮಕ್ಕಳ ಸಮ್ಮೇಳನ

ವಿಜಯ ಸಂಘರ್ಷ
ಭದ್ರಾವತಿ: ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಹಾಗು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಜ.2 ರ ಮಂಗಳವಾರ ದಂದು ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯಲ್ಲಿ ಭದ್ರಾವತಿ ತಾಲ್ಲೂಕು
10 ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,
ಅಂದು ಬೆಳಿಗ್ಗೆ 9.30 ಕ್ಕೆ ಧ್ವಜಾರೋಹಣ ನಡೆಯಲಿದ್ದು, 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ಭದ್ರಾಕಾಲೋನಿಯ ಭದ್ರಾ ಪ್ರೌಢ ಶಾಲೆಯ 9 ನೇ ತರಗತಿ ವಿಧ್ಯಾರ್ಥಿನಿ ಸಿಂಚನ ಸಮ್ಮೇಳನವನ್ನು ಉದ್ಘಾಟಿಸಲಿದ್ದು, ನ್ಯೂಟೌನ್ ಶ್ರೀ ಸತ್ಯಸಾಯಿ ಪ್ರೌಢ ಶಾಲೆಯ 8 ನೇ ತರಗತಿ ವಿಧ್ಯಾರ್ಥಿನಿ ಕೆ.ಆ‌ರ್.ಸೇವಂತಿ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.

ಶಾಸಕ ಬಿ.ಕೆ.ಸಂಗಮೇಶ್ವರ, ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ್ ಮುಖ್ಯ ಅಥಿತಿಗಳಾಗಿ ಆಗಮಿಸುವರು. ಎಂ.ಎಸ್.ಸುಧಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ನಂತರ ಕವಿ ಗೋಷ್ಟಿ ಮತ್ತು ಕಥಾ ಗೋಷ್ಟಿ ನಡೆಯಲಿದೆ. ಮಧ್ಯಾಹ್ನ ಪ್ರಚಲಿತ ವಿದ್ಯಾಮಾನ ಸುವರ್ಣ ಕರ್ನಾಟಕದ ಮಹತ್ವ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ನನ್ನ ಪಾತ್ರವೇನು? ಸಾಹಿತ್ಯ ಓದು-ಬರಹ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಬಗ್ಗೆ ಚರ್ಚೆ ನಡೆಯಲಿದೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಅಧ್ಯಕ್ಷೆ ಶೃತಿ ವಸಂತ ಕುಮಾರ್, ಕ್ಷೇತ್ರ ಸಮನ್ವಯಾಧಿಕಾರಿ ಪಂಚಾಕ್ಷರಿ, ಶಿಕ್ಷಣ ಸಂಯೋಜಕ ರವಿಕುಮಾರ್, ಉದ್ಯಮಿ ಬಿ.ಕೆ.ಜಗನ್ನಾಥ್, ದೈವಜ್ಞ ಸಮಾಜದ ಅಧ್ಯಕ್ಷ ಪಿ.ವೆಂಕಟರಮಣ ಪೇಟ್, ಪೃಥ್ವಿರಾಜ್, ಪರಮೇಶ್ವರಪ್ಪ, ಸಿದ್ದಪ್ಪ, ಹೆಚ್ ಪಿ.ಪ್ರಸನ್ನ ಭಾಗವಹಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು