ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ: ಬಿಜೆಪಿ-ಜೆಡಿಎಸ್ ಪ್ರಮುಖರು ಭಾಗಿ

ವಿಜಯ ಸಂಘರ್ಷ
ಭದ್ರಾವತಿ: ಭಾರತೀಯ ಜನತಾ ಪಕ್ಷದ ಕಾರ್ಯಕರ್ತ ಗೋಕುಲ್ ಕೃಷ್ಣನ್ ಮೇಲಿನ ಹಲ್ಲೆ ಪ್ರಕರಣ ಖಂಡಿಸಿ ಹಾಗು ಕ್ಷೇತ್ರದಲ್ಲಿ ಹದಗೆಟ್ಟಿರುವ ಶಾಂತಿ ಸುವ್ಯವಸ್ಥೆ ಮರು ಸ್ಥಾಪಿಸುವಂತೆ ಆಗ್ರಹಿಸಿ ಬುಧವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ ಸಿದ್ರಾಮಣ್ಣ, ಕ್ಷೇತ್ರದ ಜನರು ನಂಬಿಕೆ, ವಿಶ್ವಾಸದೊಂದಿಗೆ ಮತ ನೀಡುವ ಮೂಲಕ ಜನಪ್ರತಿನಿಧಿಯನ್ನು ಆಯ್ಕೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಇಲ್ಲಿನ ಜನರ ಹಿತ ಕಾಪಾಡುವುದು ಅವರ ಜವಾಬ್ದಾರಿಯಾಗಿದೆ.

ಕ್ಷೇತ್ರದಲ್ಲಿ ಅವಳಿ ಕಾರ್ಖಾನೆಗಳು ಅವನತಿ ದಾರಿ ಹಿಡಿದಿರುವುದರಿಂದ ನಿರುದ್ಯೋಗ ಸಮಸ್ಯೆ ಉಲ್ಬಣ ವಾಗಿದೆ. ಕ್ಷೇತ್ರದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಯುವ ಸಮೂಹ ದಾರಿ ತಪ್ಪುವಂತಾಗಿದ್ದು, ಅಶಾಂತಿ
ವಾತಾವರಣ ನಿರ್ಮಾಣಗೊಂಡಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಡಿ.ಟಿ ಮೇಘರಾಜ್, ತಾಲೂಕು ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ಮಂಗೋಟೆ ರುದ್ರೇಶ್,ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ಆರ್. ಕರುಣಾಮೂರ್ತಿ, ಎಂ.ಎ ಅಜಿತ್, ಮಹೇಶ್ ಮತ್ತಿತರರು ಮಾತನಾಡಿದರು.

ಬಿ.ಕೆ ಶ್ರೀನಾಥ್, ಜಿ.ಆನಂದ ಕುಮಾ‌ರ್, ಕೂಡ್ಲಿಗೆರೆ ಹಾಲೇಶ್, ವಿ.ಕದಿರೇಶ್,ಚನ್ನೆಶ್, ನಗರಸಭಾ ಸದಸ್ಯರಾದ ಶಶಿಕಲಾ
ನಾರಾಯಣಪ್ಪ, ಅನುಪಮ ಚನ್ನೇಶ್, ರಂಗಸ್ವಾಮಿ, ಕುಮಾರ್, ಸುಬ್ಬಣ್ಣ, ಜೆಡಿಎಸ್ ಶಾರದ ಅಪ್ಪಾಜಿ, ತಿಮ್ಮೇಗೌಡ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರತಿಭಟನೆಗೂ ಮುನ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು