ಪತಿಯಿಂದ ಪತ್ನಿಯ ಹತ್ಯೆ..?

ವಿಜಯ ಸಂಘರ್ಷ
ಭದ್ರಾವತಿ: ಪತಿಯಿಂದಲೇ ಪತ್ನಿ ಹತ್ಯೆಯಾಗಿ ರುವ ಘಟನೆ ನಗರದ ಬೊಮ್ಮನಕಟ್ಟಿ ಹೌಸಿಂಗ್‌ ಬೋರ್ಡ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.

ರಮ್ಯಾ (36) ಹತ್ಯೆಯಾಗಿದ್ದು, ಈಕೆಯ ಪತಿ ನಾಗಭೂಷಣ್ ಎಂಬುವರು ಹತ್ಯೆ ಮಾಡಿರುವುದಾಗಿ ಪೊಲೀಸರಿಗೆ ಶರಣಾಗಿ ದ್ದಾರೆ ಎನ್ನಲಾಗಿದೆ. ನಾಗಭೂಷಣ್ ಆಟೋ ಚಾಲಕನಾಗಿದ್ದು, ದಂಪತಿಗೆ ಸುಮಾರು 16 ವರ್ಷ ವಯಸ್ಸಿನ ಪುತ್ರ ಇದ್ದಾನೆ.

ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆಯಲ್ಲಿ ದಂಪತಿ ಮಾತ್ರ ವಾಸವಿದ್ದರು ಹತ್ಯೆಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು