ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಇಲ್ಲದ ಸ್ವಾರ್ಥ ಸರ್ಕಾರ: ಶಾಸಕ ಬಿ.ಕೆ.ಸಂಗಮೇಶ್ವರ್

ವಿಜಯ ಸಂಘರ್ಷ
ಭದ್ರಾವತಿ: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಉದ್ಯಮಿಗಳ ಪರವಾಗಿದೆ ಹೊರತು ರೈತಪರವಾಗಿಲ್ಲ. ರೈತರ ಸಾಲಮನ್ನಾ ನಿರ್ಲಕ್ಷಿಸುವ ಕೇಂದ್ರ ಸರ್ಕಾರ, ಉದ್ಯಮಿಗಳ ಸಾಲಮನ್ನಾಕ್ಕೆ ಆಸಕ್ತಿ ತೋರುತ್ತದೆ. ಇದು ಜನಪರ ಕಾಳಜಿ ಇಲ್ಲದ ಸ್ವಾರ್ಥ ಸರ್ಕಾರ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ದೂರಿದರು.

ಗುರುವಾರ ನಗರದ ಶಾಸಕರ ಗೃಹಕಚೇರಿ ಆವರಣದಲ್ಲಿ ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಧ್ವಜಾರೋಹಣ ಮತ್ತು ಪ್ರತಿಜ್ಞೆ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ಪ್ರಧಾನಿ ಆಗುವಲ್ಲಿ ಮತ್ತು ಹೆಚ್.ಡಿ.ಕುಮಾರಸ್ವಾಮಿ 2 ಬಾರಿ ಮುಖ್ಯಮಂತ್ರಿ ಆಗುವಲ್ಲಿ ಕಾಂಗ್ರೆಸ್ ಸಹಕಾರವಿದೆ. ಆದರೆ ಇದನ್ನು ಮರೆತು ಇದೀಗ ಜೆಡಿಎಸ್ ಬಿಜೆಪಿಯ ಬಿ ಟೀಂ ನಂತೆ ಕಾರ್ಯನಿರ್ವಹಿಸುತ್ತಿದೆ. ಬಿಜೆಪಿ ಅಭಿವೃದ್ಧಿ ಮೂಲಕ ಹಿಂದೂಗಳ ಮನಗೆಲ್ಲಲಿ. ಆದರೆ ಹಿಂದೂತ್ವದ ಹೆಸರಿನಲ್ಲಿ ಸಂಘರ್ಷಗಳನ್ನು ಸೃಷ್ಟಿಸಿ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಮಾತನಾಡಿ, ದೇಶ ಸಂಕಷ್ಟದಲ್ಲಿದೆ. ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆದಿರುವಂತೆಯೇ ರಾಷ್ಟ್ರದಲ್ಲು ಬಿಜೆಪಿ ಕಿತ್ತೊಗೆಯಲು ಕಾರ್ಯಕರ್ತರು ಪಣತೊಡೋಣ. ಪಕ್ಷ ಇದ್ದರೆ ಕಾರ್ಯಕರ್ತರು ಎಂಬುದನ್ನು ಎಲ್ಲ ಕಾರ್ಯಕರ್ತರು ತಿಳಿದು ಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಶಾಸಕರ ಆಪ್ತ ಸಹಾಯಕ ಈಶ್ವರ್ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಶಾಸಕರು ಧ್ವಜಾರೋಹಣ ನೆರವೇರಿಸಿದ ನಂತರ ಸಭಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯ, ಮುಖಂಡರಾದ ಸಿ.ಎಂ.ಸಾದಿಕ್, ಚೆನ್ನಪ್ಪ, ರವಿಕುಮಾರ್,ಗಂಗಾಧರ್, ಅಮೀರ್ ಜಾನ್, ಲಕ್ಷ್ಮೀದೇವಿ, ಅಂತೋಣಿ ವಿಲ್ಸನ್, ಗೋಪಿ ಸೇರಿದಂತೆ ಹಲವರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು