ವಿಜಯ ಸಂಘರ್ಷ
ಭದ್ರಾವತಿ: ಕುಂದುಕೊರತೆ ಸಭೆಯಲ್ಲಿ ಸಮಸ್ಯೆ ಬಗ್ಗೆ ಸಂಘಟನೆಗಳ ಪದಾಧಿಕಾರಿ ಗಳು ಚರ್ಚಿಸಬೇಕು ಹೊರತು ಭಾಷಣ ಮಾಡಬಾರದು. ಅದೇರೀತಿ ಅಧಿಕಾರಿ ಗಳು ಸಾರ್ವಜನಿಕರು ಕೇಳುವ ಪ್ರಶ್ನೆಗೆ ಉತ್ತರ ನೀಡುವುದು ಜವಾಬ್ದಾರಿ ಎಂದು ಲೋಕಾಯುಕ್ತ ನಿರೀಕ್ಷಕ ಎಚ್.ಎಸ್.ಸುರೇಶ್ ಹೇಳಿದರು.
ತಾ ಪಂ ಸಭಾಂಗಣದಲ್ಲಿ ಲೋಕಾಯುಕ್ತ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾರ್ವಜನಿಕರ ಅಹವಾಲು ಸ್ವೀಕಾರ ಹಾಗು ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಅಹವಾಲು ಆಲಿಸಿ ಮಾತನಾಡಿದರು.
ಸಾರ್ವಜನಿಕರು ಮಾಹಿತಿ ಕೇಳಿದಾಗ ಕೂಡಲೇ ಸ್ಪಂದಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಅಸಮಂಜಸ ಉತ್ತರಗಳು ಹಾಗು ನಿರ್ಲಕ್ಷ್ಯದ ಕಾರಣದಿಂದ ದೂರುಗಳು ಸಲ್ಲಿಕೆಯಾಗುತ್ತವೆ. ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಗಳು ಹಾಗು ನೌಕರರು ಕಡ್ಡಾಯವಾಗಿಗುರುತಿನ ಚೀಟಿಗಳನ್ನು ಧರಿಸುವಂತೆ ಸೂಚಿಸಿದರು.
ಸಭೆಯಲ್ಲಿ ಪೌರಾಯುಕ್ತ ಪ್ರಕಾಶ್ ಚೆನ್ನಪ್ಪನವರ್, ಪೊಲೀಸ್ ವೃತ್ತ ನಿರೀಕ್ಷಕರಾದ ಜಗದೀಶ್ ಹಂಚಿನಾಳ್, ನಾಗಮ್ಮ, ತಾಲ್ಲೂಕು ವೈದ್ಯಾಧಿಕಾರಿ ಡಾ.ಎಂ.ಬಿ.ಅಶೋಕ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
Tags:
ಲೋಕಾಯುಕ್ತ ಸಭೆ