ವಿಜಯ ಸಂಘರ್ಷ
ಭದ್ರಾವತಿ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿರ್ಮಿಸಲ್ಪಟ್ಟಿರುವ ನೂತನ ಸಭಾಂಗಣವನ್ನು ಜ.29ರ ಸೋಮವಾರ ದಂದು ಉದ್ಘಾಟನೆ ಹಮ್ಮಿಕೊಂಡಿರುವುದಾಗಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1.30ಕೋಟಿ ರೂ .ವೆಚ್ಚದಲ್ಲಿ ನಗರದ ಹೊಸಸೇತುವೆ ರಸ್ತೆ ಸಿದ್ದಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಯಲ್ಲಿ ನೂತನ ಸಭಾಂಗಣ ನಿರ್ಮಿಸ ಲಾಗಿದೆ. 250ರಿಂದ 300 ಆಸನ ವ್ಯವಸ್ಥೆ ಹಾಗು ಎ.ಸಿ. ಸೌಲಭ್ಯ ಬೊಳಗೊಂಡಿರುವ ಈ ಸುಸಜ್ಜಿತ ಸಭಾಂಗಣದ ಉದ್ಘಾಟನಾ ಕಾರ್ಯಕ್ರಮ ವನ್ನು ಜ.29ರ ಸಂಜೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆಂದರು.
ಸುದ್ದಿಗೋಷ್ಠಿಯಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜನಾರ್ಧನ್, ಉಪಾಧ್ಯಕ್ಷ ರಾಜ್ ಕುಮಾರ್, ಖಜಾಂಚಿ ಎಸ್.ಕೆ.ಮೋಹನ, ಜಂಟಿ ಕಾರ್ಯದರ್ಶಿ ಎಸ್.ಉಮಾ, ಪ್ರಾಥಮಿಕ ಬಳಕೆದಾರರ ಸಂಘದ ಅಧ್ಯಕ್ಷ ಸುಧೀಂದ್ರರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್ ಸೇರಿದಂತೆ ಹಲವು ನೌಕರರು ಪಾಲ್ಗೊಂಡಿದ್ದರು.