ಪ್ರತಿಯೊಬ್ಬ ವಿದ್ಯಾರ್ಥಿಯು ರಾಜ್ಯ-ರಾಷ್ಟ್ರದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳ ಬೇಕು:ಜಿ.ಸಿ.ಸೋಮಶೇಖರ್

ವಿಜಯ ಸಂಘರ್ಷ
ಶಿವಮೊಗ್ಗ: ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸು ವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು.

ನಗರದ ನೂರು ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ.ಪಠ್ಯ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳೂ ಕೂಡ ಅಷ್ಟೇ ಮುಖ್ಯವಾಗಿದೆ. ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಲ್ಲಿಯೂ ಸಹ ಅಸಕ್ತಿಯನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಸಾಧ್ಯವೆಂದರು.

ಪ್ರತಿಯೊಬ್ಬ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚು ಒತ್ತನ್ನು ನೀಡುತ್ತಿದ್ದಾರೆ, ಇದು ಒಳ್ಳೆಯ ಬೆಳವಣಿಗೆ .ಶಿಕ್ಷಕರು ಸಹ ತಮ್ಮ ವಿದ್ಯಾರ್ಥಿ ಗಳ ಫಲಿತಾಂಶಕ್ಕಾಗಿ ಶ್ರಮಿಸುತ್ತಿದ್ದು , ಇದರ ಪರಿಣಾಮ ವಾಗಿಯೇ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿ ಕೂಡ ತಮ್ಮ ಶಾಲೆ, ತಮ್ಮ ಊರು, ಜಿಲ್ಲೆ,ರಾಜ್ಯ ಹಾಗೂ ರಾಷ್ಟ್ರದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು ಎಂದರು.

ಶ್ರೀನಿಧಿ ಎಜುಕೇಷನ್ ಸೊಸೈಟಿಯ ಆಂತರಿಕ ಲೆಕ್ಕ ಪರಿಶೋಧಕ ಕೊಳಗಿ ಡಿ ವಾಸಪ್ಪಗೌಡ ಮಾತನಾಡಿ, ಈ ವಿದ್ಯಾರ್ಥಿಗಳಿಗೆ ವಿಜ್ಞಾನದ ವಿಷಯದ ಬಗ್ಗೆ ಆಸಕ್ತಿ ಮೂಡಿಸಬೇಕು ಎಂದರು.

ರೋಟರಿ ಮಾಜಿ ಗವರ್ನರ್ ವಿಜಯ ಕುಮಾರ್ ಮಾತನಾಡಿ, ವಿದ್ಯಾರ್ಥಿ ಗಳಲ್ಲಿ ಕ್ರೀಡಾ ಅಸಕ್ತಿ ಕಡಿಮೆಯಾಗು ತ್ತಿದೆ. ಕ್ರೀಡೆ ಯಲ್ಲಿ ಹೆಚ್ಚು ಅಸಕ್ತಿಯನ್ನು ಬೆಳೆಸಿಕೊಳ್ಳ ಬೇಕು, ಅದು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಬೆಳೆಸುತ್ತದೆ. ಪಾಠ ಪ್ರವಚನಗಳಷ್ಟೇ ಕ್ರೀಡೆಯೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ರೀಡೆ ಗಳಲ್ಲಿ ಇದೇ ತರಹದ ಮಕ್ಕಳಿಗೆ ಮೌನ ನೀಡಿ ಗೌರವಿಸಲಾಯಿತು ಕಾರ್ಯಕ್ರಮದಲ್ಲಿ ಶ್ರೀನಿಧಿ ಎಜುಕೇಷನ್ ಸೊಸೈಟಿಯ ಉಪಾಧ್ಯಕ್ಷ ಟಿಡಿಆರ್ ಶ್ರೀಕಂಠಯ್ಯ, ಇನ್ನರ್ ವ್ಹೀಲ್ ಜಿಲ್ಲಾ ಕಾರ್ಯದರ್ಶಿ ಶಬರಿ ಕಡಿದಾಳ್, ರೋಟರಿ ಮಾಜಿ ಆಧ್ಯಕ್ಷ ಗಣೇಶ್, ಶಾಲೆಯ ಆಡಳಿತಾಧಿಕಾರಿ ಟಿ.ಪಿ.ನಾಗರಾಜ್, ಬಿಂದು ವಿಜಯಕುಮಾರ್ ಇಂಟ್ರಾಕ್ಟ್ ಕ್ಲಬ್ಬಿನ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು