ವಿಜಯ ಸಂಘರ್ಷ
ಭದ್ರಾವತಿ : ಬಿ.ಇಡಿ ತರಬೇತಿ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಭರಿತವಾದ ಆದರ್ಶ ಮೌಲ್ಯಗಳನ್ನು ತುಂಬುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದು ಕುವೆಂಪು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಚಂದ್ರಶೇಖರ್ ಹೇಳಿದರು.
ಅವರು ಮಂಗಳವಾರ ಹಳೇಸೀಗೆ ಬಾಗಿಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಎಜ್ಯುಕೇಷನ್ ಟ್ರಸ್ಟ್, ರಾಜೀವ್‌ಗಾಂಧಿ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳಲ್ಲಿ ಸಂಸ್ಕೃತಿಗಿಂತ ಸಂಸ್ಕಾರಭರಿತವಾದ ಆದರ್ಶ ಮೌಲ್ಯಗಳನ್ನು ತುಂಬುವ ಅಗತ್ಯವಿದ್ದು, ಇದು ಭವಿಷ್ಯದಲ್ಲಿ ಸಮಸಮಾಜ ನಿರ್ಮಾಣಕ್ಕೆ ಪೂರಕವಾಗಲಿದೆ ಎಂದರು.
ಹಿರಿಯ ಜಾನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ, ಶಿಕ್ಷಕರು ಸಾಮಾಜಿಕ ಜೀವನದ ಹೊಂದಾಣಿಕೆ ಕೌಶಲ್ಯ ಹಾಗು ಸಂಸ್ಕಾರಯುತವಾದಂತಹ ಆದರ್ಶ ಜೀವನ ರೂಪಿಸಿಕೊಳ್ಳಬೇಕಂದು ಕರೆ ನೀಡಿದರು.
ಟ್ರಸ್ಟ್ ಕಾರ್ಯದರ್ಶಿ ವಾಣಿ ರವಿಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಕರಾಗಿ ಸಮಾಜಕ್ಕೆ ಮತ್ತು ಮುಂದಿನ ದಿನಮಾನಗಳಲ್ಲಿ ಒಳಿತನ್ನುಂಟು ಮಾಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಪ್ರಾಂಶುಪಾಲ ಎಸ್. ಹನುಮಂತಪ್ಪ ಮಾತನಾಡಿ, ಶಿಕ್ಷಕ ವೃತ್ತಿಯ ಗುರಿ ತಲುಪಲು ಮಾನವೀಯತೆ, ವಿಭಿನ್ನ ಕೌಶಲ್ಯಗಳನ್ನು ಬೆಳೆಸಿ ಕೊಳ್ಳಬೇಕೆಂದರು.
ರಂಜಿತಾ ಪ್ರಾರ್ಥಿಸಿ, ಎಂ.ಬಿ ಸಂಗೀತ ಸ್ವಾಗತಿಸಿದರೆ. ಟಿ. ಪೂಜಿ ಮತ್ತು ಸಂಗೀತ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.