ವಿಜಯ ಸಂಘರ್ಷ
ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವದ ಅಂಗವಾಗಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ತಹಶೀಲ್ದಾರ್ ಕೆ.ಆರ್ ನಾಗರಾಜ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,ಗೌರವ ಧ್ವಜ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಬಿ. ಕೆ.ಸಂಗಮೇಶ್ವರ್ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ ಆಶಯದಂತೆ ಸರ್ವರಿಗೂ ಸಮಬಾಳು– ಸರ್ವರಿಗೂ ಸಮಪಾಲು ಹಾಗೂ ಸಮಾನತೆ ದೊರೆಯಬೇಕು. ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ದೊರೆಯುವಂತಾಗಬೇಕುಸರ್ವರೂ ವಿದ್ಯಾವಂತರಾಗಬೇಕು ಎಂದು ಕರೆ ನೀಡಿದರು.
ದೇಶದ ಅತ್ಯಂತ ಶ್ರೇಷ್ಠ ಸಂಸತ್ ಭವನ ಉದ್ಘಾಟನೆ ಹಾಗೂ ಐತಿಹಾಸಿಕ ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯವರಿಗೆ ಆಹ್ವಾನಿಸದೇ ಇರುವುದು ದಲಿತರಿಗೆ ಅನ್ಯಾಯ ಮಾಡಲಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಕೊಟ್ಟ ಮಾತಿನಂತೆ ಎಂಪಿಎಂ ಕಾರ್ಖಾನೆ ಯನ್ನು 6 ತಿಂಗಳಲ್ಲಿ ಖಾಸಗಿಯಾಗಿ ಆರಂಭಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರವರಿಂದ ಉದ್ಘಾಟನೆ ನೆರವೇರಿಸಲಾಗುವುದು. ಶೀಘ್ರದಲ್ಲೇ ಹೊಸಮನೆ ಪೋಲೀಸ್ ಠಾಣೆ, ಭದ್ರಾಕಾಲೋನಿ ನೂತನ ಸರ್ಕಾರಿ ಆಸ್ಪತ್ರೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್,ನಗರ ಸಭಾ ಸದಸ್ಯರುಗಳಾದ ಚನ್ನಪ್ಪ,ಅನುಪಮಾ ಚನ್ನೇಶ,ಟಿಪ್ಪು ಸುಲ್ತಾನ್, ಶಶಿಕಲಾ ನಾರಾಯಣಪ್ಪ,ಮಾಜಿ ಸದಸ್ಯ ಬದ್ರಿನಾರಾಯಣ,ಪೌರಾಯುಕ್ತ ಚನ್ನಪ್ಪನವರ್, ಗ್ರೇಡ್ 2 ತಹಶೀಲ್ದಾರ್ ರಂಗಮ್ಮ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ, ಡಿ ವೈ ಎಸ್ ಪಿ ಕೆ ಆರ್ ನಾಗರಾಜ್,ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್, ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಕಾಶ್, ಡಾ. ವಾಸು ಪಂಡಿತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್ ಕುಮಾರ್, ಹೆಚ್.ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ಬಸವೇಶ್ವರ ಧರ್ಮಸಂಸ್ಥೆ ಅಧ್ಯಕ್ಷ ಶಿವಕುಮಾರ್, ಎ ಎಸ್ ಐ ದಿವಾಕರ್,
ಡಾ.ರಶ್ಮಿ, ಶಶಿಕುಮಾರ್, ಜಹೀರ್ ಖಾನ್
ಹರೀಶ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 70 ಮಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಪೊಲೀಸ್, ಎನ್ ಸಿಸಿ ಹಾಗೂ ಶಾಲಾ ವಿದ್ಯಾರ್ಥಿಗಳ ತಂಡದಿಂದ ಪಥಸಂಚಲನ ನೆರವೇರಿತು.
Tags:
ಭದ್ರಾವತಿ ಗಣರಾಜ್ಯೋತ್ಸವ