ವಿಜಯ ಸಂಘರ್ಷ
ಭದ್ರಾವತಿ: ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ ಗಣರಾಜ್ಯೋತ್ಸವ ವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ರಾಷ್ಟ್ರಧ್ವಜಾ ಅನಾವರಣ ಮಾಡಿದರು.
ವಿಐಎಸ್‌ಎಲ್ ಕಾರ್ಖಾನೆಯ ಭದ್ರತಾ ಸಿಬ್ಬಂದಿಗಳು,ಎನ್.ಸಿ.ಸಿ, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು.
ನಗರದ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸೈಂಟ್ ಚಾರ್ಲ್ಸ್ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರೀಯ ಏಕೀಕರಣ ಮತ್ತು ದೇಶಪ್ರೇಮ ವಿಷಯಗಳ ಕುರಿತು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿ, ಸಮೂಹ ಗಾನ ಹಾಡಿದರು.
ವಿಐಎಸ್‌ಎಲ್ ಉದ್ಯೋಗಿಗಳು ಕಳೆದ ವರ್ಷದಲ್ಲಿ ಮಾಡಿದ ವಿಶೇಷ ಸಾಧನೆ ಗಾಗಿ ವಿಶೇಷ ಪ್ರಶಸ್ತಿ, ಜವಹಾರ್, ನೆಹರು ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಿಗೆ ಹಾಗೂ ಮಿಕ್ಕ ಎಲ್ಲಾ ಪಥಸಂಚಲನ ತಂಡಗಳಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು.
ವಿಐಎಸ್ಎಲ್ ಕಾರ್ಮಿಕರ ಮಕ್ಕಳಿಗಾಗಿ ಆಕ್ಸಿಸ್ ಬ್ಯಾಂಕ್ ಆಯೋಜಿಸಿದ್ದ ಪ್ರಬಂಧ ಮತ್ತು ಚಿತ್ರ ಬರೆಯುವ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಶಾಖೆಯ ಸಹಾಯಕ ಉಪಾಧ್ಯಕ್ಷ ಎಚ್.ಎಸ್.ಭಾಸ್ಕರ್, ವಿಐಎಎಲ್‌ನ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಶೋಭಾ ಶಿವಶಂಕರನ್ ಮಹಾ ಪ್ರಬಂಧಕರು (ಹಣಕಾಸು ಮತ್ತು ಲೆಕ್ಕ) ಬಹುಮಾನ ವಿತರಿಸಿದರು.
ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ)ನಿತಿನ್ ಜೋಸ್, ಡಿಸೆಂಬರ್ 2023 ರಲ್ಲಿ ನಡೆದ ಕೇರಳ ರಾಜ್ಯದ ಪ್ಯಾರಾ ಬ್ಯಾಡ್ಮಿಂಟನ್ ಡಬಲ್ ಸ್ಪರ್ದೆಯಲ್ಲಿ ಬಂಗಾರದ ಪದಕವನ್ನು ಗಳಿಸಿದ್ದಕ್ಕಾಗಿ ಅಭಿನಂದಿಸಲಾಯಿತು.
ವಿಐಎಸ್‌ಎಲ್ ಕಾರ್ಮಿಕರ ಸಂಘ ಮತ್ತು ವಿಐಎಸ್ಎಲ್ ಅಧಿಕಾರಿಗಳ ಸಂಘ, ಕಾರ್ಯಕಾರಿ ಸಮಿತಿ ಸದಸ್ಯರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಶಾಲಾ ಮಕ್ಕಳು, ಪೋಷಕರು, ಅಧ್ಯಾಪಕ ವೃಂದ ದವರು, ನಾಗರೀಕರು ಕಾಯಕ್ರಮದಲ್ಲಿ ಭಾಗವಹಿಸಿದ್ದರು.
ಸಹಾಯಕ ಮಹಾಪ್ರಬಂಧಕರು (ಹಣಕಾಸು) ಇಳಯರಾಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ವಿಐಎಸ್‌ಎಲ್‌ನ ಸಾರ್ವಜನಿಕ ಸಂಪರ್ಕ, ನಗರಾಡಳಿತ ಮತ್ತು ರಕ್ಷಣಾ ವಿಭಾಗದವರ ಸಹಕಾರದಲ್ಲಿ ನೆರವೇರಿತು.
Tags:
ವಿಐಎಸ್ ಎಲ್ ಗಣರಾಜ್ಯೋತ್ಸವ