ವಿಜಯ ಸಂಘರ್ಷ
ಭದ್ರಾವತಿ: ಕೇಂದ್ರ ಸರ್ಕಾರ ಹಾಗೂ ಉಕ್ಕು ಪ್ರಾಧಿಕಾರ ಆಡಳಿತ ವರ್ಗ ಕೈಕೊಂಡಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಶಿವಮೊಗ್ಗ ಸಂಸದರ ನಿವಾಸದವರೆಗೆ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಖಾನೆ ಮುಂಭಾಗದಲ್ಲಿ ಜಮಾಯಿಸಿದ ಗುತ್ತಿಗೆ ಕಾರ್ಮಿಕರು ಘೋಷಣೆಗಳನ್ನು ಕೂಗಿ ಜಾಥಾ ಆರಂಭಿಸಿದರು. ಮಹಿಳಾ ಕಾರ್ಮಿಕರು ಬಸ್ ಮೂಲಕ ತೆರಳಿದರು. ನಂತರ ಸಂಸದ ನಿವಾಸದ ಮುಂಭಾಗ ಪ್ರತಿಭಟನಾ ಧರಣಿ ನಡೆಸುವ ಮೂಲಕ ತಮ್ಮ ನೋವುಗಳನ್ನು ಸಂಸದರ ಮುಂದೆ ತೋರ್ಪಡಿಸಿಕೊಂಡರು.
ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಹಾಗು ಪದಾಧಿಕಾರಿಗಳು, ನಿವೃತ್ತ ಕಾರ್ಮಿಕ ನರಸಿಂಹಚಾರ್ ಸೇರಿದಂತೆ ಇನ್ನಿತರರು ಜಾಥಾ ನೇತೃತ್ವ ವಹಿಸಿದ್ದರು.