ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾಂತರಾಜ್ ಅಧಿಕಾರ ಸ್ವೀಕಾರ

ವಿಜಯ ಸಂಘರ್ಷ
ಭದ್ರಾವತಿ: ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 28ನೇ ವಾರ್ಡಿನ ನಗರಸಭಾ ಸದಸ್ಯ ಕಾಂತರಾಜ್ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರಸಭೆ ಸಭಾಂಗಣದಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದ ಕಾಂತರಾಜ್, ಸರ್ವ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು.

ನಗರಸಭೆ ಸದಸ್ಯ ಬಿ.ಟಿ.ನಾಗರಾಜ್ ಮಾತನಾಡಿ, ನಗರಸಭೆಯ ಕೆಲಸಗಳು ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವುದರಿಂದ ಕಳಪೆ ಕಾಮಗಾರಿ ತಡೆಯುವುದು ನಮ್ಮ ಜವಾಬ್ದಾರಿ. ಗುಣಮಟ್ಟದ ಕೆಲಸಗಳು ನಡೆದಾಗ ಜನಪ್ರತಿನಿಧಿಗಳಿಗೆ ಜನರು ತಾವಾಗಿಯೇ ಗೌರವನೀಡುತ್ತಾರೆ. ಈ ನಿಟ್ಟಿನಲ್ಲಿ ನಾವು ಪ್ರಯತ್ನಿಸೋಣ ಎಂದರು.

ನಗರಸಭೆ ಸದಸ್ಯ ಚೆನ್ನಪ್ಪ ಮಾತನಾಡಿ, ಅಭಿವೃದ್ಧಿ ಕಾರ್ಯಗಳಿಗೆ ಪಕ್ಷತೀತವಾಗಿ ಸರ್ವ ಸದಸ್ಯರ ಬೆಂಬಲ ದೊರೆಯುತ್ತದೆ. ಆದ್ದರಿಂದ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚೆನ್ನಪ್ಪನವರ್, ಸದಸ್ಯರಾದ ಮಣಿ, ಜಾರ್ಜ್, ಅನಿತಾ ಮಲ್ಲೇಶ್, ಗೀತ ರಾಜ್ ಕುಮಾರ್, ಶ್ರೇಯಸ್, ಮಂಜುನಾಥ್, ಪ್ರೇಮ ಬದರಿ ನಾರಾಯಣ್ ಸೇರಿದಂತೆ ಹಲವರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆ ಗಳ ಪದಾಧಿಕಾರಿಗಳು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು