ಕಣ್ಣಿನ ಆರೋಗ್ಯದ ಬಗ್ಗೆ ಅರಿವು ಅಗತ್ಯ:ಡಾ.ವಿಶ್ವಾಸ್

ವಿಜಯ ಸಂಘರ್ಷ
ಶಿವಮೊಗ್ಗ: ಕಣ್ಣು ಅತ್ಯಂತ ಸೂಕ್ಷ್ಮ ವಾಗಿದ್ದು, ಕಣ್ಣಿನ ಆರೋಗ್ಯದ ಬಗ್ಗೆ ಎಲ್ಲರೂ ಜಾಗೃತಿ ಹೊಂದಬೇಕು. ಕಣ್ಣು ಸುರಕ್ಷಿತವಾಗಿ ಕಾಪಾಡಿ ಕೊಳ್ಳುವ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು ಎಂದು ವೈದ್ಯ ಡಾ.ವಿಶ್ವಾಸ್ ಹೇಳಿದರು.

ಗುಡ್‌ಲಕ್ ಆರೈಕೆ ಕೇಂದ್ರದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ “ಧನ್ಯವಾದ ಮಲೆನಾಡು” ಹಾಗೂ ಕಣ್ಣಿನ ತಪಾಸಣೆ ಉಚಿತ ಶಿಬಿರದಲ್ಲಿ ಮಾತನಾಡಿ, ಶಂಕರ ಕಣ್ಣಿನ ಆಸ್ಪತ್ರೆ ಪ್ರಾರಂಭವಾಗಿ 15 ವರ್ಷ ಪೂರೈಸಿದ್ದು, ಸಮಾಜದ ಎಲ್ಲರಿಗೂ ಮತ್ತಷ್ಟು ಸೇವೆ ತಲುಪಿಸ ಬೇಕೆಂಬ ಆಶಯ ದಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಶಂಕರ ಕಣ್ಣಿನ ಆಸ್ಪತ್ರೆ ವತಿಯಿಂದ ಮಾಧವ ನೆಲೆ, ವಿಪ್ರ ಕ್ಷೇಮಾಭಿವೃದ್ಧಿ ಸಂಘ, ಹೀಗೆ ವಿವಿಧೆಡೆಗಳಲ್ಲಿ ಬಿಪಿ ತಪಾಸಣಾ, ಕಣ್ಣಿನ ತಪಾಸಣಾ ಶಿಬಿರ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲರಿಗೂ ಶಿಬಿರದ ಪ್ರಯೋಜನ ತಲುಪಿಸಲಾಗುವುದು ಎಂದರು.

ಗುಡ್‌ಲಕ್ ಆರೈಕೆ ಕೇಂದ್ರದ ಅಧ್ಯಕ್ಷ ರವೀಂದ್ರನಾಥ ಐತಾಳ್ ಮಾತನಾಡಿ, ಮನುಷ್ಯದ ದೇಹದ ಎಲ್ಲ ಅಂಗಗಳನ್ನು ಸುಸ್ಥಿತಿಯಲ್ಲಿ ಇರುವಂತೆ ನೋಡಿ ಕೊಳ್ಳಬೇಕು. ಸಮಯಕ್ಕೆ ಅನುಗುಣ ವಾಗಿ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿ ಕೊಳ್ಳಬೇಕು. ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಪ್ರತಿಯೊಬ್ಬರೂ ಗಮನ ಹರಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಕೇಂದ್ರದ ಕಾರ್ಯದರ್ಶಿ ಷಡಾಕ್ಷರಿ ಅವರನ್ನು ಸನ್ಮಾನಿಸಲಾಯಿತು. ಆರೈಕೆ ಕೇಂದ್ರ ದಲ್ಲಿದ್ದವರ ಕಣ್ಣಿನ ತಪಾಸಣೆ ನಡೆಸಲಾಯಿತು. ನಿರ್ದೇಶಕ ಜಿ.ವಿಜಯಕುಮಾರ್, ಸಂಚಾಲಕ ಪ್ರದೀಪ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು