ವಿಜಯ ಸಂಘರ್ಷ
ಶಿಕಾರಿಪುರ: ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ದಲ್ಲಿ ರೂಢಿ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಧಾರ್ಮಿಕ ಭಾವನೆಗೆ ನೋವುಂಟು ಮಾಡಿರುವ ದುಷ್ಕರ್ಮಿ ಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸದಸ್ಯ ಶಿವಯ್ಯ ನೇತೃತ್ವದಲ್ಲಿ ಆಗ್ರಹಿಸಲಾಯಿತು.
ಕರ್ನಾಟಕ ರಾಜ್ಯ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಶಾಂತಿಯುತ ಪ್ರತಿಭಟನೆ ನಡೆಸಿ ಮಾತನಾಡಿದರು.
ಅನಾದಿಕಾಲದಿಂದ ಅಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ‘ಅಂಧಕಾಸುರನ ಸಂಹಾರ’ ನಡೆಯುವ ಸಂದರ್ಭದಲ್ಲಿ ಕೆಲ ದುಷ್ಕರ್ಮಿಗಳು ಪೂರ್ವನಿಯೋಜಿತ ಷಡ್ಯಂತ್ರ‍್ಯವನ್ನು ಮಾಡಿ, ಉತ್ಸವದಲ್ಲಿ ಗಲಾಟೆ ಸೃಷ್ಟಿಸಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ಧಿಕ್ಕಾರ ಕೂಗಿ, ಉತ್ಸವ ಆಚರಣೆಗೆ ಭಂಗ ತರುವ ಮೂಲಕ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ.
ಉತ್ಸವ ಮೂರ್ತಿಯನ್ನು ಅಪವಿತ್ರ ಮಾಡಿ ರಾಜ್ಯದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ ಆದರೆ ಪೋಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯ ಎಂದರು.
ಕೂಡಲೇ ಸರಕಾರವು ಉತ್ಸವಕ್ಕೆ ಅಡ್ಡಿಪಡಿಸಿದ ಅಪರಾಧಿಗಳನ್ನು ಬಂಧಿಸಿ ತಕ್ಕ ಶಾಸ್ತಿ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆ ಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸ ಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸದಸ್ಯರಾದ ವಿ. ರಾಮಣ್ಣ, ವಿ.ರಘು, ವೀರಶೈವ ಪುರೋಹಿತ ಅರ್ಚಕರ ಸಂಘದ ಅಧ್ಯಕ್ಷರಾದ ಪ್ರಭುಸ್ವಾಮಿ ಆರಾಧ್ಯಮಠ, ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಕೆ. ಹೆಚ್. ಪುಟ್ಟಸ್ವಾಮಿ, ಕೆಆರ್ ಎಸ್
ಅಧ್ಯಕ್ಷ ರವಿ ನಾಯ್ಕ, ರಾಜ್ಯ ಶಕ್ತಿ ಸಂಗ್ರಾಮ ವೇದಿಕೆ ತಾಲೂಕು ಅಧ್ಯಕ್ಷ ಆನಂದ್, ಸವಿತ ಯುವಕ ಸಂಘದ ಅಧ್ಯಕ್ಷ ಎಸ್.ಮಧುಕುಮಾರ್, ವಿಶ್ವ ಹಿಂದೂ ಪರಿಷತ್ ನ ಪ್ರಕಾಶ್ ಎಸ್. ಎಂ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಂಜುನಾಥ್ ಬಿ.ವಿ. ಮಹಾಂತಯ್ಯ, ಚನ್ನವೀರಯ್ಯ, ಕರಿಬಸವಯ್ಯ, ಶಂಭುಲಿಂಗಯ್ಯ, ವಿನಾಯಕ ಸ್ವಾಮಿ, ಸತೀಶ್ ಮತ್ತಿತರರು ಉಪಸ್ಥಿತರಿದ್ದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಿದರು.