ವಿಜಯ ಸಂಘರ್ಷ
ಭದ್ರಾವತಿ: ಪ್ರಸ್ತತ ಬಜೆಟ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ 6 ನೇ ಗ್ಯಾರೆಂಟಿ ಹೆಚ್ಚಿಸುವಂತೆ ಆಗ್ರಹಿಸಿ ಬುಧವಾರ ನಗರದ ತಾಲೂಕು ಪಂಚಾಯತ್ಕ ಕಚೇರಿ ಮುಂಭಾಗ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು ಅಂಗನವಾಡಿ ಕಾರ್ಯಕರ್ತೆ ಯರಿಗೆ ಮಾಸಿಕ 15 ಸಾವಿರ ರೂ ಹಾಗೂ ಸಹಾಯಕಿಯರಿಗೆ 10 ಸಾವಿರ ರೂ ಗೌರವಧನವನ್ನು ಹೆಚ್ಚಳ,ನಿವೃತ್ತರಿಗೆ ಮೂರು ಲಕ್ಷ ರೂ ಹಿಡಿಗಂಟು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಈ ಭಾರಿಯ ಬಜೆಟ್ ಗೆ ಅನುಮೊಧನೆ ಯನ್ನು ಪಡೆಯುವ ಪೂರ್ವದಲ್ಲಿಯೇ ಅಂಗನವಾಡಿಗಳಲ್ಲಿ ದುಡಿಯುತ್ತಿರುವ ಮಹಿಳಾ ಸಮುದಾಯಕ್ಕೆ ಗೌರವಧನ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಹಾಗೂ ಕೆಆರ್ ಐಡಿಎಲ್ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಅಧ್ಯಕ್ಷೆ ವೇದಾವತಿ, ಉಪಾಧ್ಯಕ್ಷೆ ಇಂದಿರಾ ಬಾಯಿ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವಿಶಾಲ ಸೇರಿದಂತೆ ನೂರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.