ವಿಜಯ ಸಂಘರ್ಷ
ಭದ್ರಾವತಿ: ಇಂದಿನ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ತಮ್ಮ ನಿತ್ಯಜೀವನದಲ್ಲಿ ಅಳವಡಿಸಿಕೊಂಡು ಮೂಢನಂಬಿಕೆಗಳಿಂದ ದೂರವಿರ ಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಕರೆ ನೀಡಿದರು.
ಬುಧವಾರ ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸರ್ ಸಿ ವಿ ರಾಮನ್ ರವರ ರಾಮನ್ ಎಫೆಕ್ಟ್ ಆವಿಷ್ಕಾರದ ನೊಬೆಲ್ ಬಹುಮಾನ ಗಳಿಸಿದ ನೆನಪಿಗಾಗಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ ಸಿ ವಿ ರಾಮನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ವಿಜ್ಞಾನ ಪ್ರಯೋಗ ಉದ್ಘಾಟಿಸಿ ಅವರು ಮಾತನಾಡಿದರು.
ಸಂಪನ್ಮೂಲ ಶಿಕ್ಷಕ ಮುಕ್ತೆಶ್, ಬೊಮ್ಮನಕಟ್ಟೆ ಕ್ಲಸ್ಟರ್ ನ ಸಿಆರ್ ಪಿ, ಲಕ್ಷ್ಮಿ ತೀರ್ಪುಗಾರರಾಗಿ ಭಾಗವಹಿಸಿದ್ದರು. ಉಪ ಪ್ರಾಚಾರ್ಯರಾದ ಸುಮನ ಟಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿಜ್ಞಾನ ಶಿಕ್ಷಕರಾದ ಜಯಲಕ್ಷ್ಮಿ, ನಾಗರಾಜು, ಫರ್ಜಾನ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕಡೆಯಲ್ಲಿ ವಿಜೇತರಾದ ವಿದ್ಯಾರ್ಥಿನಿ ಯರಿಗೆ ಬಹುಮಾನ ವಿತರಣೆ ಮಾಡಲಾಯಿತು.