ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ: ಬಿ.ವೈ.ರಾಘವೇಂದ್ರ

ವಿಜಯ ಸಂಘರ್ಷ
ಸಾಗರ(ಆನಂದಪುರ): ಮುoದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಯವರಿಗೆ 400 ಕ್ಕೂ ಹೆಚ್ಚಿನ ಸ್ಥಾನವನ್ನು ದೇಶದ ಜನತೆ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ನಾನು ಮಾಡಿದ ಅಭಿವೃದ್ಧಿ ಕೆಲಸಗಳನ್ನು ಜನರು ನೋಡುತ್ತಿದ್ದಾರೆ ಜನತೆ ನನಗೆ ಮತ್ತೊಮ್ಮೆ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಯಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಕಾರ್ಯನಿಮಿತ್ತ ಸಾಗರಕ್ಕೆ ತೆರಳುವ ಮಾರ್ಗ ಮಧ್ಯದ ಆನಂದಪುರದಲ್ಲಿ ಮಾತನಾಡಿ, ಹಿರಿಯರಾದ ಎಲ್.ಕೆ.ಆಡ್ವಾಣಿ ಯವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ್ದು ಸಂತಸವನ್ನುoಟು ಮಾಡಿದೆ ಎಂದು ಪ್ರತಿಕ್ರಿಯಿಸಿದರು.

ಸಂಸದನಾಗಿ ಜಿಲ್ಲೆಯ ರಸ್ತೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿ ದ್ದೇನೆ. ಜಿಲ್ಲೆಯ ವ್ಯಾಪ್ತಿಯಲ್ಲಿ 15 ಸಾವಿರ ಕೋಟಿ ರೂಪಾಯಿಗಳ ವೆಚ್ಛದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗದಿಂದ ಆನಂದಪುರ ರಸ್ತೆ ಅಭಿವೃದ್ಧಿಗೆ 600ಕೋಟಿ ರೂಗಳನ್ನು ವ್ಯಯಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪನವರು ನನ್ನ ಕೆಲಸದ ಬಗ್ಗೆ ಮೆಚ್ಚುಗೆಯ ಮಾತನಾಡಿ ದ್ದಾರೆಯೇ ಹೊರತು ಅವರ ಮಾತಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಹೊನಗೋಡು ರತ್ನಾಕರ್, ಶಾಂತಕುಮಾರ್, ಕೆರೆಹಿತ್ಲುಗಿರಿಶ್, ಶಿವಕುಮಾರ್ , ಬಿ.ಸಿ.ರಮೇಶ್, ರೇವಪ್ಪ, ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

(ವರದಿ ಎಸ್ ಡಿ ಚಂದ್ರಶೇಖರ್ )

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು