ಮೆಸ್ಕಾಂ ಆನ್‍ಲೈನ್ ಸೇವೆ 10 ದಿನ ಸ್ಥಗಿತ

ವಿಜಯ ಸಂಘರ್ಷ
ಶಿವಮೊಗ್ಗ: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ರಾಜ್ಯದ ಎಲ್ಲಾ ಎಸ್ಕಾಂಗಳ RAPDRP-ನಗರ ಪ್ರದೇಶಗಳಾದ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ಗಳಲ್ಲಿ ಗ್ರಾಹಕರಿಗೆ ವಿದ್ಯುತ್ ಬಿಲ್ಲುಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಇತ್ಯಾದಿ ಸೇವೆಗಳು ಮಾ.10 ರಿಂದ 19 ರವರೆಗೆ 10 ದಿನಗಳ ಕಾಲ ಲಭ್ಯವಿರುವುದಿಲ್ಲ.

ಉನ್ನತೀಕರಿಸಿದ ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯ ದಲ್ಲಿ ತಂತ್ರಾಂಶದ ಕಾರ್ಯಕ್ಷಮತೆ ಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಸೇವಾ ಸ್ಥಗಿತ ಕಾಲದಲ್ಲಿ ಗ್ರಾಹಕರು ಮೆಸ್ಕಾಂ ನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು