ಭದ್ರಾವತಿಯ ವಿವಿದೆಡೆ ಮಾ:10 ರಂದು ವಿದ್ಯುತ್ ಅಡಚಣೆ

ವಿಜಯ ಸಂಘರ್ಷ
ಭದ್ರಾವತಿ: ಶಿವಮೊಗ್ಗ ಎಂಆರ್ ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದ 110 ಮಾರ್ಗದ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಮಾ:10 ರ ಭಾನುವಾರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರಗೆ ವಿದ್ಯುತ್ ಅಡಚಣೆಯಾಗಲಿದೆ.

ಭದ್ರಾವತಿ ಜೆ.ಪಿ.ಎಸ್. ಕಾಲೋನಿಯ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಪ್ರದೇಶಗಳಾದ ನ್ಯೂಟೌನ್, ನ್ಯೂಕಾಲೋನಿ, ಕಾಗದ ನಗರ, ಉಜ್ಜನಿಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ,ಹಳೇಸಿದ್ದಾಪುರ, ಹೊಸೂರು, ತಾಂಡ್ಯ,ಹುತ್ತಾ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವ್ಯತ್ತ, ಹಿರಿಯೂರು, ಹೊಳೆ ಗಂಗೂರು, ಕಾರೇಹಳ್ಳಿ, ಕಂಬದಾಜ ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಹಳೇಬಾರಂದೂರು, ಹಳ್ಳಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವರನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ ಅರಳಿಕೊಪ್ಪ ಇತ್ಯಾದಿ.

ಮಾಚೇನಹಳ್ಳಿ, ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ವೀರಾಪುರ,ರಾಮನಕೊಪ್ಪ ಹಾಗಲಮನೆ, ಸಂಕ್ಷಿಪುರ, ಸಿರಿಯೂರು, ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್, ವೀರಾಪುರ ಹಾತಿಕಟ್ಟೆ, ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು