ಮಾ: 29 ರಿಂದ ಭದ್ರಾನದಿ ಯಿಂದ ನೀರು ಬಿಡುಗಡೆ

ವಿಜಯ ಸಂಘರ್ಷ 
ಭದ್ರಾ ಜಲಾಶಯದಿಂದ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಅಭಾವವಿರುವುದರಿಂದ ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಭದ್ರಾನದಿಯ ಮೂಲಕ ಮಾ: 29 ರಿಂದ ಏ: 6 ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್‍ನಂತೆ ಒಟ್ಟು 
2 ಟಿ.ಎಂ.ಸಿ ನೀರನ್ನು ಹರಿಸಲಾಗುವುದು. 

ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ನದಿಗೆ ಇಳಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. 

ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್‍ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು