ವಿಜಯ ಸಂಘರ್ಷ
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಕ್ಷೇತ್ರಕ್ಕೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏ: 12 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ನಡೆದ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಅಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಮಂಗಳವಾರ ಮಾತನಾಡಿದ ಅವರು, ಏ: 12 ರಂದು 25 ಸಾವಿರ ಕಾರ್ಯಕರ್ತ ರೊಂದಿಗೆ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು.
ಪುತ್ರ ಕಾಂತೇಶ್ಗೆ ಟಿಕೆಟ್ ತಪ್ಪಿದ ದಿನದಿಂದ ರೆಬೆಲ್ ಆಗಿರುವ ಈಶ್ವರಪ್ಪ ನೇರವಾಗಿಯೇ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅಪ್ಪ-ಮಕ್ಕಳ ಕೈಯಲ್ಲಿ ಸಿಲುಕಿರುವ ಬಿಜೆಪಿಯ ಶುದ್ಧೀಕರಣಕ್ಕಾಗಿ ಚುನಾವಣೆ ಅಖಾಡಕ್ಕೆ ಬರುತ್ತಿದ್ದೇನೆ ಎಂದು ತಮ್ಮ ಸ್ಪರ್ಧೆ ಬಗ್ಗೆ ಈಶ್ವರಪ್ಪ ಸ್ಪಷ್ಟನೆ ನೀಡಿದ್ದಾರೆ.
ಅಪ್ಪ-ಮಕ್ಕಳ ಹಿಡಿತದಲ್ಲಿ ಬಿಜೆಪಿ ಪಕ್ಷ ಸಿಲುಕಿ, ನಲುಗುತ್ತಿದೆ ಎಂದು ನೇರವಾಗಿ ಬಿಎಸ್ವೈ ಮತ್ತು ಬಿ.ವೈ.ರಾಘವೇಂದ್ರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.