ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ತೀರ್ಥಹಳ್ಳಿಯಲ್ಲಿ ಎನ್ ಐಎ ಅಧಿಕಾರಿಗಳ ದಾಳಿ

ವಿಜಯ ಸಂಘರ್ಷ 
ತೀರ್ಥಹಳ್ಳಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್‌ಐಎ ತಂಡ ತನಿಖೆ ಆರಂಭಿಸಿದೆ.

 ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಯಲ್ಲಿ ಬೆಂಗಳೂರಿನಿಂದ ಬಂದಿರುವ 15 ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವಿನೊಂದಿಗೆ ದಾಳಿ ಮಾಡಿದ್ದು, ಕೆಲ ಶಂಕಿತರ ಮನೆಗಳಲ್ಲಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು